ಕರಾವಳಿ ಮಲೆನಾಡು ಸೇರಿದಂತೆ ಕರ್ನಾಟಕದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸೆ. 20 ಮತ್ತು 21ರಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಮನ್ಸೂಚನೆ ನೀಡಲಾಗಿದೆ. ಕರಾವಳಿ ಭಾಗದಲ್ಲಿ ಮುಂಗಾರು ಚುರುಕುಗೊಂಡಿದೆ. ಸೆಪ್ಟೆಂಬರ್ 23ರ ತನಕ ಗುಡುಗು ಸಹಿತ ಮಳೆಯಾಗಲಿದೆ.
ಹಾಸನದಲ್ಲಿ ಶನಿವಾರ ಮಧ್ಯಾಹ್ನ ವಿವಿಧ ಪ್ರದೇಶಗಳಲ್ಲಿ ಮಳೆಯಾಗಿದೆ.
ರಾತ್ರಿ ಮಳೆ ಬಿಡುವು ನೀಡಿತ್ತು. ಭಾನುವಾರ ಬೆಳಗ್ಗೆಯೇ ದಟ್ಟವಾದ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆ ಆರಂಭವಾಗಿದೆ, ನಗರದಲ್ಲಿ ಉಷ್ಣಾಂಶ ಇಳಿಮುಖವಾಗಿದೆ.
Tags
ರಾಜ್ಯ