ಹಾಸನ:- ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಸೆ.27 ರಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಶ್ವ ಪ್ರವಾಸೋಧ್ಯಮ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನ ಮಂತ್ರಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ಅವರು ಗೌರವಾನ್ವಿತ ಉಪಸ್ಥಿತಿ ವಹಿಸಲಿರುವರು.
ಶಾಸಕರಾದ ಪ್ರೀತಮ್ ಜೆ. ಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಿ.ಎಸ್. ಶ್ವೇತಾ ದೇವರಾಜ್, ಸಂಸದರಾದ ಪ್ರಜ್ವಲ್ ರೇವಣ್ಣ, ವಿಧಾನ ಸಭೆ ಶಾಸಕರುಗಳಾದ ಹೆಚ್.ಡಿ. ರೇವಣ್ಣ, ಹೆಚ್.ಕೆ. ಕುಮಾರಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಸಿ.ಎನ್. ಬಾಲಕೃಷ್ಣ, ಎ.ಟಿ. ರಾಮಸ್ವಾಮಿ, ಕೆ.ಎಸ್. ಲಿಂಗೇಶ್, ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಕೆ.ಟಿ. ಶ್ರೀಕಂಠೇಗೌಡ, ಎಂ.ಎ. ಗೋಪಾಲಸ್ವಾಮಿ ಹಾಗೂ ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಜ್ಯೋತಿ ಅಣ್ಣಪ್ಪ, ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್‍ಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಬಿ.ಎ. ಪರಮೇಶ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿರುವರು.
Tags
ಹಾಸನ