ಸರ್ಕಾರಿ ಪ್ರೌಢ ಶಾಲೆಗೆ ಮಕ್ಕಳನ್ನು ದಾಖಲಿಸಲು ಪೋಷಕರು ಪೈಪೋಟಿ

ಮಂಡ್ಯ: ಮಳವಳ್ಳಿ ತಾಲ್ಲೂಕು ಮಾರಗೌಡನಹಳ್ಳಿ ಸರ್ಕಾರಿ ಪ್ರೌಢ ಶಾಲೆಗೆ ಮಕ್ಕಳನ್ನು ದಾಖಲಿಸಲು ಪೋಷಕರು ಪೈಪೋಟಿ ನಡೆಸುತ್ತಿದ್ದಾರೆ. ಪ್ರತಿಷ್ಠಿತ ಶಾಲೆಗಳಲ್ಲಿ ಓದುತ್ತಿದ್ದ ಮಕ್ಕಳೂ ಅಲ್ಲಿಂದ ವಾಪಸ್ಸಾಗಿ, ಈ ಶಾಲೆ ಸೇರುತ್ತಿದ್ದಾರೆ.
ಇಲ್ಲಿ ಕನ್ನಡ-ಇಂಗ್ಲಿಷ್‌ ಎರಡೂ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುತ್ತಿದೆ. ಎಸ್‌ಎಸ್‌ಎಲ್‌ಸಿಯಲ್ಲಿ ನೂರರಷ್ಟು ಫಲಿತಾಂಶ, ಉಚಿತ ಊಟ-ವಸತಿಯೊಂದಿಗೆ ರಾತ್ರಿ ಪಾಠ, ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಒಂದೇ ವರ್ಷ 54 ವಿದ್ಯಾರ್ಥಿಗಳ ಆಯ್ಕೆ-ಹೀಗೆ ಹಲವು ಕಾರಣಗಳಿಂದ ಶಾಲೆಗೆ ಮೊದಲಿನಿಂದಲೂ ಬೇಡಿಕೆ ಇದೆ.

ಈ ಬಾರಿ, ಇಲ್ಲಿ ದಾಖಲಾದ ವಿದ್ಯಾರ್ಥಿಗಳ ಸಂಖ್ಯೆ 500 ದಾಟಿದೆ. ಬೆಂಗಳೂರು, ಮುಂಬೈಗೆ ವಲಸೆ ಹೋಗಿದ್ದವರು ಕೋವಿಡ್‌ ಕಾರಣದಿಂದಾಗಿ ಮರಳಿ ಬಂದಿದ್ದು, ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುತ್ತಿದ್ದಾರೆ.

Post a Comment

Previous Post Next Post