ಪೌರ ಕಾರ್ಮಿಕರ ಮಾದರಿಯಲ್ಲಿ ನೇರ ವೇತನ ನೀಡಲು ಆಗ್ರಹಿಸಿ ಹೊರ ಗುತ್ತಿಗೆ ವಾಹನ ಚಾಲಕರಿಂದ ಪ್ರತಿಭಟನೆ

ಹಾಸನ:  ಪೌರ ಕಾರ್ಮಿಕರ ಮಾದರಿಯಲ್ಲಿ ಖಾಯಂ ಮಾಡಿ ನೇರ ವೇತನ ಜಾರಿಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ವಾಹನಚಾಲಕರ ಸಂಘದಿಂದ ನಗರಸಭೆ ಮುಂದೆ ಮಹಾತ್ಮ ಗಾಂದೀಜಿ ಮತ್ತು ಅಂಬೇಡ್ಕರ್ ಭಾವಚಿತ್ರವನ್ನಿಟ್ಟು ಪ್ರತಿಭಟನೆ ನಡೆಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

    ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಹಾಗೂ ಪಾಲಿಕೆಗಳಲ್ಲಿ ಹಲವಾರು ವರ್ಷಗಳಿಂದ ತ್ಯಾಜ್ಯಸಾಗಿಸುತ್ತಿರುವ ವಾಹನ ಚಾಲಕರು ಹಾಗೂ ವಾಟರ್ ಮೆನ್‍ಗಳ ಹೊರಗುತ್ತಿಗೆಯನ್ನು ಕೂಡಲೇ ರದ್ದು ಪಡಿಸಿ ಪೌರ ಕಾರ್ಮಿಕರ ಮಾದರಿಯಲ್ಲಿ ಖಾಯಂ ಮಾಡಬೇಕು. ರಾಜ್ಯದಲ್ಲಿ ಈ ಎರಡು ವಿಭಾಗಗಳಿಂದ 10 ಸಾವಿರಕ್ಕೂ ಹೆಚ್ಚು ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಗರಗಳ ಸ್ವಚ್ಛತೆ ನಿರ್ವಹಣೆಯಲ್ಲಿ ತ್ಯಾಜ್ಯ ಸಾಗಾಣಿಕೆ ಚಾಲಕರ ಪಾತ್ರ ದೊಡ್ಡದಾಗಿದು,್ದ ಪೌರಕಾರ್ಮಿಕರು ಸಮಾನವಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಹಾಗೆಯೇ ವಾಟರ್‍ಮೆನ್‍ಗಳು ಸಹ ಯಾವುದೇ ಸೇವಾ ಭದ್ರತೆಯಿಲ್ಲದೆ ಕನಿಷ್ಠ ವೇತನಕ್ಕೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈಗಾಗಿ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ಆಧಾರಿತ ನೌಕರರನ್ನು ನೇರ ವೇತನಕ್ಕೆ ಒಳಪಡಿಸುವುದು ಅಗತ್ಯವಾಗಿದೆ ಎಂದು ಹೇಳಿದರು. ಸರ್ಕಾರವು ಅನಗತ್ಯವಾಗಿ ಜಿ.ಎಸ್.ಟಿ. ಹೆಸರಿನಲ್ಲಿ ಕೇಂದ್ರ ಸರ್ಕಾರಕ್ಕೆ ನೀಡುತ್ತಿರುವ 100 ಕೋಟಿಗೂ ಹೆಚ್ಚಿನ ಹಣ ಉಳಿತಾಯವಾಗಲಿದೆ. ಇದಲ್ಲದೆ ಹೊರಗುತ್ತಿಗೆ ಏಜೆನ್ಸಿಗಳಿಗೆ ನೀಡುವ ಸೇವಾ ಶುಲ್ಕ ಉಳಿಯಲಿದೆ ಹಾಗಾಗಿ ಹೊರಗುತ್ತಿಗೆ ಪದ್ಧತಿ ರದ್ದು ಪಡಿಸಿ ಖಾಯಂ ಗೊಳಿಸುವಂತೆ ನಗರ ಸಭೆಗೆ ಅಧಿಕಾರಿಗಳಲ್ಲಿ ಮನವಿ ಮಾಡಲಾಯಿತು. ಇದಕ್ಕೆ ಮೊದಲು ನಗರಸಭೆಯ ಕುವೆಂಪು ಸಭಾಂಗಣದಲ್ಲಿ ಕಾರ್ಮಿಕರೊಂದಿಗೆ ಅಧಿಕಾರಿಗಳು ಸಭೆ ಮಾಡಿ ಚರ್ಚಿಸಿದರು.

      ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ವಾಹನಚಾಲಕರ ಸಂಘದ ಜಿಲ್ಲಾಧ್ಯಕ್ಷ ಧರ್ಮರಾಜು, ಉಪಾಧ್ಯಕ್ಷ ರಜನಿಕಾಂತ್, ಪ್ರಸನ್ನ,  ಕಾರ್ಯಾಧ್ಯಕ್ಷ ಮಂಜುನಾಥ್, ನಿರ್ದೇಶಕರಾದ ಲೋಹಿತ್, ಮಂಜು, ವಿನೋದ್ ಕುಮಾರ್, ವಿಜಯೇಂದ್ರ ಇತರರು ಪಾಲ್ಗೊಂಡಿದ್ದರು.


Post a Comment

Previous Post Next Post