ಬ್ರೇಕಿಂಗ್ ನ್ಯೂಸ್ : ಹಾಸನ ಗ್ರಾಮಾಂತರ ಇನ್ಸ್ಪೆಕ್ಟರ್ ಆಗಿ ಪಿ.ಸುರೇಶ್ ನೇಮಕ

ರಾಜ್ಯದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿದ್ದ ಐವರು ಪೊಲೀಸ್ ಇನ್ಸ್‌ಪೆಕ್ಟರ್(ಸಿವಿಲ್)ಗಳನ್ನು ವರ್ಗಮಾಡಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ.

ಅದರಂತೆ ಈ ಹಿಂದೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಪಿಎಸ್‌ಐ ಆಗಿ ದಕ್ಷ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಸುರೇಶ್ ಪಿ ಅವರು ಹಾಸನ ಗ್ರಾಮಾಂತರ ವೃತ್ತದ ಸಿಪಿಐ ಆಗಿ ನಿಯೋಜನೆಗೊಂಡಿದ್ದಾರೆ.

ಆರಂಭದಲ್ಲಿ ಮಂಗಳೂರು ಮೊದಲಾದ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸಿ ಜಿಲ್ಲೆಗೆ ಬಂದಿದ್ದ ಸುರೇಶ್, ಹಾಸನ ನಗರ, ಬಡಾವಣೆ ಪೊಲೀಸ್ ಠಾಣೆ, ಚನ್ನರಾಯಪಟ್ಟಣ ಗ್ರಾಮಾಂತರ ಹಾಗೂ ಹಿರೀಸಾವೆ ಠಾಣೆಗಳಲ್ಲಿ ಪಿಎಸ್‌ಐ ಆಗಿ ಉತ್ತಮ ರೀತಿಯಲ್ಲಿ ಕೆಲಸ ಮಾಡಿದ್ದರು. ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕುವುದರ ಜೊತೆಗೆ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಖಡಕ್ ಕರ್ತವ್ಯ ನಿರ್ವಹಣೆ ಮೂಲಕ ಹೆಚ್ಚು ಜನಪ್ರಿಯತೆ ಗಳಿಸಿದ್ದರು. ಇದೇ ಕಾರಣಕ್ಕೆ ಸುರೇಶ್ ಅವರು ಮುಖ್ಯಮಂತ್ರಿಗಳ ಚಿನ್ನದ ಪದಕ ಗೌರವಕ್ಕೂ ಪಾತ್ರರಾಗಿದ್ದರು. ಅದಾದ ಬಳಿಕ ಸಿಪಿಐ ಆಗಿ ಭಡ್ತಿ ಹೊಂದಿ ಕರ್ನಾಟಕ ಲೋಕಾಯುಕ್ತಕ್ಕೆ ವರ್ಗವಾಗಿದ್ದರು. ಇದೀಗ ಮತ್ತೆ ಜಿಲ್ಲೆಗೆ ವರ್ಗವಾಗಿ ಮರಳಿರುವುದು ಒಳ್ಳೆ ಬೆಳವಣಿಗೆಯಾಗಿದೆ.

Post a Comment

Previous Post Next Post