ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಗೃಹ ಸಚಿವ ಬಸವರಾಜ ಬೊಮ್ಮಾಯಿಗೂ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಈ ಸಂಬಂಧ ಮಾಹಿತಿ ನೀಡಿರುವ ಬಸವರಾಜ್ ಬೊಮ್ಮಾಯಿ, ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್-19 ಪರೀಕ್ಷೆಯಲ್ಲಿ ಸೊಂಕು ದೃಢಪಟ್ಟಿರುತ್ತದೆ. ಈ ಹಿನ್ನೆಲೆಯಲ್ಲಿ ನಾನು ಸಹ ಪರೀಕ್ಷೆಗೆ ಒಳಪಟ್ಟಿದ್ದು ನನಗೂ ಸಹ ಸೊಂಕು ದೃಢಪಟ್ಟಿದ್ದು, ಯಾವುದೇ ರೀತಿಯ ರೋಗ ಲಕ್ಷಣಗಳು ಇರುವುದಿಲ್ಲ ಹಾಗೂ ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ. ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಪರೀಕ್ಷೆಗೆ ಒಳಪಡುವಂತೆ ಹಾಗೂ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದು ಮನವಿ ಮಾಡಿದ್ದಾರೆ.
ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್-19 ಪರೀಕ್ಷೆಯಲ್ಲಿ ಸೊಂಕು ದೃಢಪಟ್ಟಿರುತ್ತದೆ. ಈ ಹಿನ್ನೆಲೆಯಲ್ಲಿ ನಾನು ಸಹ ಪರೀಕ್ಷೆಗೆ ಒಳಪಟ್ಟಿದ್ದು ನನಗೂ ಸಹ ಸೊಂಕು ದೃಢಪಟ್ಟಿದ್ದು, ಯಾವುದೇ ರೀತಿಯ ರೋಗ ಲಕ್ಷಣಗಳು ಇರುವುದಿಲ್ಲ ಹಾಗೂ ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ.#COVID19India
Tags
ರಾಜ್ಯ