ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಚಾಮುಂಡಿ ಬೆಟ್ಟಕ್ಕೆ ಬೇಟಿ.

 ಮೈಸೂರು: ನೂತನ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಅಧಿಕಾರ ಸ್ವೀಕಾರ ಮಾಡುವುದಕ್ಕೂ ಮೊದಲು ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಚಾಮುಂಡಿ ಬೆಟ್ಟಕ್ಕೆ ರೋಹಿಣಿ ಸಿಂಧೂರಿ ಹಾಗೂ ಪತಿ ಸುಧೀರ್ ರೆಡ್ಡಿ ದಂಪತಿ ಭೇಟಿ ನೀಡಿ, ನಾಡದೇವತೆ ಚಾಮುಂಡೇಶ್ವರಿಯ ದರ್ಶನ ಪಡೆದರು. ನೂತನ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ದೇವಸ್ಥಾನದ ಆಡಳಿತ ಮಂಡಳಿ ಬರಮಾಡಿಕೊಂಡಿತು.

ಚಾಮುಂಡಿ ಬೆಟ್ಟ ದೇಗುಲದ ಕಾರ್ಯ ನಿರ್ವಾಹಕ ಅಧಿಕಾರಿ ಎನ್.ಎಸ್ ಯತಿರಾಜ್ ಸಂಪತ್ ಕುಮಾರನ್, ವ್ಯವಸ್ಥಾಪಕ ಗೋವಿಂದ ರಾಜ್ ಹಾಗೂ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ನೂತನ ಜಿಲ್ಲಾಧಿಕಾರಿಗಳನ್ನು ಬರಮಾಡಿಕೊಂಡರು.

Post a Comment

Previous Post Next Post