ಖ್ಯಾತ ಗಾಯಕ ಎಸ್​.ಪಿ. ಬಾಲಸುಬ್ರಹ್ಮಣ್ಯಂ ವಿಧಿವಶ

ಎಸ್ ಪಿ ಬಾಲಸುಬ್ರಹ್ಮಣ್ಯಂ ಸುಪ್ರಸಿದ್ಧ ಹಿನ್ನೆಲೆ ಗಾಯಕರು. ದಕ್ಷಿಣ ಭಾರತದ ಕನ್ನಡ, ತಮಿಳು ಮತ್ತು ತೆಲುಗು ಚಿತ್ರರಂಗಗಳಲ್ಲಿ ಅವರದ್ದು ಅದ್ವಿತೀಯ ಸಾಧನೆ. ಗಾಯನದಲ್ಲಷ್ಟೇ ಅಲ್ಲದೆ, ನಟನೆ, ಸಂಗೀತ ಸಂಯೋಜನೆ, ಚಲನಚಿತ್ರ ನಿರ್ಮಾಣ, ಧ್ವನಿದಾನ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆ ಮುಂತಾದವುಗಳಲ್ಲಿ ಅವರದು ನಿರಂತರವಾದ ಸಾಧನೆ 

ವಿವಿಧ ಭಾಷೆಗಳ ಪರಿಧಿಯಲ್ಲಿ ೪೦,೦೦೦ ಕ್ಕೂ ಹೆಚ್ಚು ಹಾಡುಗಳು ಹಾಡಿದ ಸರದಾರ ನಾಲ್ಕು ಭಾಷೆಗಳಲ್ಲಿ ಒಟ್ಟು ೬ ರಾಷ್ಟ್ರ ಪ್ರಶಸ್ತಿಗಳು ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿಗಳು.

೨೫ ಬಾರಿ ಆಂಧ್ರಪ್ರದೇಶ ಸರ್ಕಾರದ 'ನಂದಿ' ಪ್ರಶಸ್ತಿ,೪ ಭಾಷೆಗಳಿಗಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಏಕೈಕ ವ್ಯಕ್ತಿ.

ಸಂಗೀತ ಪ್ರಪಂಚವು ತನ್ನ ಪ್ರಕಾಶಮಾನವಾದ ನಕ್ಷತ್ರವನ್ನು ಕಳೆದುಕೊಂಡಿದೆ.

ಈ ಗಾನ ಮಾಂತ್ರಿಕನ ಸಾವು ಕೋಟ್ಯಂತರ  ಅಭಿಮಾನಿಗಳಿಗೆ ತುಂಬಲಾರದ ನಷ್ಟ 
ಭಗವಂತ ಅವರ ಆತ್ಮಕ್ಕೆ ಶಾಂತಿ ಕೊಡಲಿ - 

ಎಲ್ಲಾಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಆ ಭಗವಂತ ಕೊಡಲಿ ಓಂ ಶಾಂತಿ

Post a Comment

Previous Post Next Post