ಕಳಸ: ಗುರುವಾರ ಕಳಸಕ್ಕೆ ಭೇಟಿ ನೀಡಿದ ಸಂಸದೆ ಶೋಭಾ ಕರಂದ್ಲಾಜೆ ಜೆಡಿಎಸ್ ಕಾರ್ಯಕರ್ತರಿಂದ ಕಪ್ಪು ಪಟ್ಟಿ ಪ್ರದರ್ಶಿಸಿದ್ದಾರೆ.
ರಾಜ್ಯದಲ್ಲಿ ಎರಡು ವರ್ಷದ ಹಿಂದೆ ಮೈತ್ರಿ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಕಳಸವನ್ನು ತಾಲೂಕು ಕೇಂದ್ರವಾಗಿ ಘೋಷಣೆ ಮಾಡಿತ್ತು. ನಂತರ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಕಳಸ ತಾಲೂಕು ಅಧಿಸೂಚನೆ ಹೊರಡಿಸದ ಹಿನ್ನೆಲೆ ಜೆಡಿಎಸ್ ಕಾರ್ಯಕರ್ತರು ಸಂಸದರಿಗೆ ಕಪ್ಪು ಪಟ್ಟಿ ಪ್ರದರ್ಶಿಸಿ, ಬಿಜೆಪಿ ಸರ್ಕಾರದ ವಿರುದ್ದ ಘೋಷಣೆ ಕೂಗಿದರು.
ಜೆಡಿಎಸ್ ಕಾರ್ಯಕರ್ತರು ಸಂಸದರಿಗೆ ಮನವಿ ಪತ್ರವನ್ನು ನೀಡಲು ಮುಂದಾದಾಗ ಸಂಸದೆ ಕಾರು ನಿಲ್ಲಿಸಲಿಲ್ಲ. ಸಂಸದರ ಈ ನಡೆಯಿಂದ ಜೆಡಿಎಸ್ ಕಾರ್ಯಕರ್ತರನ್ನು ಕೆರಳಿಸಿತ್ತು. ಸಂಸದೆ ವಿರುದ್ಧ ಘೋಷಣೆ ಕೂಗುವುದರ ಮೂಲಕ ಆಕ್ರೋಶ ಹೊರ ಹಾಕಿದರು. ಈ ವೇಳೆ ಪೊಲೀಸರು ಜೆಡಿಎಸ್ ಕಾರ್ಯಕರ್ತರನ್ನು ಬಂಧಿಸಿದರು.
Tags
ಚಿಕ್ಕಮಗಳೂರು
