ಬ್ರಹ್ಮ ಶ್ರೀ ನಾರಾಯಣ ಗುರು ಅವರು ಸಮಾಜದ ತಾರತಮ್ಯಗಳನ್ನು ಕಡಿಮೆ ಮಾಡಲು ಇಡೀ ಜೀವನವನ್ನೇ ಮುಡಿಪಾಗಿಟ್ಟರು. ಅವರ ತತ್ವಾದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿಂದು ಏರ್ಪಡಿಸಿದ್ದ ಬ್ರಹ್ಮ ಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ನಾರಾಯಣಗುರು ಅವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು ಜಗತ್ತಿನಲ್ಲಿರುವುದು ಒಂದೇ ಜಾತಿ, ಒಂದೇ ಮತ ಹಾಗೂ ಒಂದೇ ದೇವರು ಎಂಬ ತತ್ವವನ್ನು ನಾರಾಯಣಗುರು ಅವರು ಪ್ರತಿಪಾದಿಸಿದ್ದಾರೆ. ಕೇರಳ ಸಮಾಜದಲ್ಲಿದ್ದ ಅಸ್ಪøಶ್ಯತೆಯನ್ನು ಹೋಗಲಾಡಿಸಲು ಹಲವಾರು ಸಂಘಟನೆಗಳ ಮಾಡುವ ಮೂಲಕ ಹೋರಾಡಿ ಸಮಾನತೆಯನ್ನು ತಂದುಕೊಟ್ಟವರು ಎಂದರು.
ದೇಶದ ಜಾತಿ ವ್ಯವಸ್ಥೆ ಹಾಗೂ ಸಮಾಜದಲ್ಲಿದ್ದ ಅಂಕುಡೊಂಕುಗಳನ್ನು ತಿದ್ದಿ ನಮ್ಮ ದೇಶ ಜಾತ್ಯಾತೀತ ರಾಷ್ಟ್ರವಾಗಲು ಶ್ರಮಿಸಿದ ಸಮಾಜ ಸುಧಾರಕರ ಕೊಡುಗೆ ಅಪಾರವಾದದ್ದು. ಹಾಗಾಗಿ ಅವರ ಆಲೋಚನೆ ಹಾಗೂ ಬೋದನೆಗಳನ್ನು ಎಲ್ಲರೂ ಅಳವಡಿಸಿಕೊಂಡಾಗ ಮಹನೀಯರ ಜಯಂತಿ ಆಚರಣೆಗಳಿಗೆ ಅರ್ಥಸಿಗುತ್ತದೆ ಎಂದು ಆರ್. ಗಿರೀಶ್ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ಎ. ಪರಮೇಶ್ ಅವರು ಮಾತನಾಡಿ ನಾರಾಯಣಗುರು ಅವರು ಕೇರಳದ ತೀಯಾ ಸಮಾಜದವರಾದ ಮದನ್ ಆಸನ್ ಹಾಗೂ ಕುಟ್ಟಿ ಅಮ್ಮಾಳ್ ಎಂಬ ದಂಪತಿಗಳ ಮಗನಾಗಿ ಜನಿಸಿದರು. ಅವರು ಹುಟ್ಟಿನಿಂದಲೇ ಸಮಾಜದಲ್ಲಿದ್ದ ಜಾತಿ ಪದ್ದತಿ ಹಾಗೂ ಅಸ್ಪøಶ್ಯತೆಗಳನ್ನು ನೋಡಿ ಅವುಗಳ ವಿರುದ್ಧ ಹೋರಾಡಿದರು. ಅವರ ತತ್ವ ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳೋಣ ಎಂದು ಹೇಳಿದರು.
ಈಡಿಗ ಸಮಾಜದ ಮುಖಂಡರಾದ ನೇರ್ಲಿಗೆ ಮಲ್ಲೇಗೌಡ ಅವರು ಮಾತನಾಡಿ ನಾರಾಯಣಗುರು ಅವರು ಕೇರಳದಲ್ಲಿ ಮಹಿಳೆಯರಿಗಿದ್ದ ಶೋಚನೀಯ ಸ್ಥಿತಿಯನ್ನು ಹಾಗೂ ಅಸ್ಪøಶ್ಯತೆಯನ್ನು ಹೋಗಲಾಡಿಸುವಲ್ಲಿ ಹೋರಾಡಿದ ಮಹಾನ್ ವ್ಯಕ್ತಿ ಹಾಗಾಗಿ ಅವರು ತೋರಿಸಿಕೊಟ್ಟ ಮಾರ್ಗದಲ್ಲಿ ನಾವೆಲ್ಲಾ ನಡೆಯಬೇಕು ಎಂದರು.
ಉಪ ವಿಭಾಗಾಧಿಕಾರಿ ಡಾ|| ನವೀನ್ ಭಟ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಎಂ.ಡಿ. ಸುದರ್ಶನ್, ಸ್ವಾತಂತ್ರ್ಯ ಹೋರಾಟಗಾರರಾದ ಹೆಚ್.ಎಂ. ಶಿವಣ್ಣ, ಆರ್ಯ ಈಡಿಗರ ಸಂಘದ ನಿರ್ದೇಶಕರಾದ ಎಸ್.ಜಿ. ಉತ್ತಮ್ ನಾಯಕ್, ಹಾಸನ ಜಿಲ್ಲಾ ಆರ್ಯ ಈಡಿಗರ ಸಂಘದ ಸಂಘಟನಾ ಕಾರ್ಯದರ್ಶಿ ಸುರೇಶ್, ಸಹ ಕಾರ್ಯದರ್ಶಿ ವಾಬೆಗೌಡ, ಶ್ರೀನಿವಾಸ್, ಆನಂದ್ ಹಾಗೂ ಮತ್ತಿತರರು ಹಾಜರಿದ್ದರು.
Tags
ಹಾಸನ