ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿಗಳಿಗೆ ಅವಿರೋದವಾಗಿ ಆಯ್ಕೆ

ಹಾಸನ ಜಿಲ್ಲಾ ಪಂಚಾಯತ್ ಐದು ಸ್ಥಾಯಿ ಸಮಿತಿಗಳಿಗೆ ಅವಿರೋಧವಾಗಿ ಆಯ್ಕೆ ನಡೆದಿದೆ.

ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣದಲ್ಲಿ ನಡೆದ ಸ್ಥಾಯಿ ಸಮಿತಿಗಳ ಚುನಾವಣೆಯಲ್ಲಿ ಸದಸ್ಯರು ನಾಮಪತ್ರ ಸಲ್ಲಿಸಿದ ನಂತರ ಪರಶೀಲನೆ ನಡೆಸಿದ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಹಾಗೂ ಚುನಾವಣಾಧಿಕಾರಿ ನಾಗ್‍ರಾಜ್ ಅವರು ಅವಿರೋಧ ಆಯ್ಕೆಯನ್ನು  ಪ್ರಕಟಿಸಿದರು.
ಹಣಕಾಸು ಲೆಕ್ಕಪರಿಶೋಧನೆ ಮತ್ತು ಯೋಜನಾ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಶ್ವೇತಾ ದೇವರಾಜ್ ಆಯ್ಕೆಯಾಗಿದ್ದು, ಸಾಮಾನ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಹೆಚ್ ಪಿ ಸ್ವರೂಪ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಭವಾನಿ ರೇವಣ್ಣ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಬಿಳಿ ಚೌಡಯ್ಯ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾಗಿ ಶಾರದಮ್ಮ ಶಿವಣ್ಣ  ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ನಾಗ್‍ರಾಜ್ ಅವರು ಪ್ರಕಟಿಸಿದರು.
ಈ ಸಂದರ್ಭದಲ್ಲಿ ಸಂಸದರಾದ ಪ್ರಜ್ವಲ್ ರೇವಣ್ಣ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ವೇತಾ ದೇವರಾಜ್, ಶಾಸಕರಾದ ಹೆಚ್ ಡಿ ರೇವಣ್ಣ, ಕೆ ಎಂ ಶಿವಲಿಂಗೇಗೌಡ, ಹೆಚ್ ಕೆ ಕುಮಾರಸ್ವಾಮಿ, ಆಡಳಿತ ಉಪ ಕಾರ್ಯದರ್ಶಿ ಚಂದ್ರಶೇಖರ್ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು. ನೂತನ ಸ್ಥಾಯಿ ಸಮಿತಿ ಅಧ್ಯಕ್ಷರುಗಳನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಲಾಯಿತು.

Post a Comment

Previous Post Next Post