ಹಿಂದಿ ದಿವಸ್​​ ವಿರೋಧಿಸಿ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಸರಣಿ ಟ್ವಿಟ್​

ಬೆಂಗಳೂರು: ವಿವಿಧ ಭಾಷೆ, ವಿಭಿನ್ನ ಸಂಸ್ಕೃತಿ, ಪರಂಪರೆಗಳನ್ನು ಒಡಲಲ್ಲಿಟ್ಟುಕೊಂಡ ಭಾರತದಲ್ಲಿ, ಕನ್ನಡಿಗರೂ ಸೇರಿದಂತೆ ಅನ್ಯ ಭಾಷಿಕರ ಮೇಲೆ ಹಿಂದಿಯನ್ನು ಬಲವಂತವಾಗಿ ಹಲವು ಮಾರ್ಗಗಳ ಮೂಲಕ ಹೇರಲಾಗುತ್ತಿದೆ. ಇಂದಿನ #HindiDiwas ಕೂಡ ಅಂಥದ್ದೇ ಅಪಮಾರ್ಗ. ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ಪ್ರಬಲ ವಿರೋಧವಿದೆ ಎಂದು ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಅವರು ಟ್ವಿಟರ್​ ಮಾಡುವ ಮೂಲಕ ವಿರೋಧ ವ್ಯಕ್ತಡಿಸಿದ್ದಾರೆ. ಇಂದು ತಮ್ಮ ಅಧಿಕೃತ ಖಾತೆ ಸರಣಿ ಟ್ವಿಟರ್​ ಮಾಡಿರುವ ಅವರು, ಹಿಂದಿ ರಾಷ್ಟ್ರಭಾಷೆಯಲ್ಲ. ರಾಷ್ಟ್ರಭಾಷೆ ಎಂಬ ಕಲ್ಪನೆ ಸಂವಿಧಾನದಲ್ಲಿಲ್ಲ. ಆದರೂ ಹಿಂದಿಯನ್ನು ರಾಷ್ಟ್ರಭಾಷೆ ಎಂದು ಬಿಂಬಿಸುವ, ಅದರಲ್ಲಿ ರಾಜಕೀಯ ಮಾಡುವ ಪ್ರಯತ್ನ ಹಿಂದಿನಿಂದಲೂ ನಡೆದೇ ಬಂದಿದೆ. ಅದು ಈಗ ವಿಪರೀತಕ್ಕೆ ಹೋಗಿದೆ. ದೇಶದ ಇತರೇ ಭಾಷಿಕರು ಇಂಥ ಪ್ರಯತ್ನಗಳ ವಿರುದ್ಧ ದಂಗೆ ಏಳುವುದಕ್ಕೂ ಮೊದಲು ಹಿಂದಿ ಹೇರಿಕೆ ನಿಲ್ಲಬೇಕು ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಸಿದ್ದಾರೆ.

ಹಿಂದಿ ಹೇರಿಕೆಗೆ ಕಲಿಕೆ ನೆಪ ನೀಡಲಾಗುತ್ತಿದೆ. ಕಲಿಕೆ ಎಂದಿಗೂ ಆಯ್ಕೆಯೇ ಹೊರತು ಹೇರಿಕೆಯಿಂದ ಕಲಿಕೆಯಾಗಲು ಸಾಧ್ಯವಿಲ್ಲ. ಭಾಷೆಯೊಂದರ ಹೇರಿಕೆಯು ಇನ್ನೊಂದು ಭಾಷೆಯ ಅಸ್ಮಿತೆಯನ್ನು ಪ್ರಶ್ನಿಸುವಂತಿರಬಾರದು. ಭಾಷೆಯ ಹೇರಿಕೆಯು ಮತ್ತೊಂದು ಭಾಷೆಯ ಅವಸಾನಕ್ಕೆ ದಾರಿಯಾಗಬಾರದು. ದೇಶದ ಸಂಸ್ಕೃತಿ, ವೈವಿದ್ಯತೆ, ಸಮಗ್ರತೆಗೆ ಧಕ್ಕೆ ತರಬಾರದು. ಕೇಂದ್ರದ ಆಡಳಿತದಲ್ಲಿ ಹಿಂದಿ ಜಾರಿಗೆ ಬಂದಿದ್ದಕ್ಕಾಗಿ, ಹಿಂದಿ ಜಾರಿ ಹೋರಾಟ ಮಾಡಿದ ಬೋಹರ್‌ ರಾಜೇಂದ್ರ ಸಿಂಹ ಜನ್ಮದಿನದ ನೆನಪಿಗಾಗಿ ಸೆ. 14ರಂದು ಹಿಂದಿ ದಿವಸ್​ ಆಚರಿಸಲಾಗುತ್ತಿದೆ. ರಾಜೇಂದ್ರ ಸಿಂಹ ಹುಟ್ಟುಹಬ್ಬದಲ್ಲಿ, ಹಿಂದಿ ಆಡಳಿತ ಭಾಷೆ ಆಗಿದ್ದರಲ್ಲಿ ಹಿಂದಿಯೇತರರು ಸಂಭ್ರಮಿಸುವುದು ಏನಿದೆ? ನಿರ್ಥಕ ಹಿಂದಿ ದಿವಸ ರದ್ದಾಗಬೇಕು ಎಂದಿದ್ದಾರೆ. ಅನ್ಯ ಭಾಷಿಕರಿಗೆ ನಿರರ್ಥಕವಾಗಿರುವ ಹಿಂದಿ ದಿವಸವನ್ನು ಆಚರಿಸುವುದೇ ಆದರೆ, ಹಿಂದಿಯೊಂದಿಗೆ ಅಧಿಕೃತ ಭಾಷೆಗಳೆನಿಸಿರುವ ಕನ್ನಡವೂ ಸೇರಿದಂತೆ ಎಲ್ಲ ಭಾಷೆಗಳ ದಿನವನ್ನು ಕೇಂದ್ರ ಸರ್ಕಾರವೇ ದೇಶದಾದ್ಯಂತ ಆಚರಣೆ ಮಾಡಬೇಕು. ಇದಕ್ಕಾಗಿ ಪ್ರತ್ಯೇಕ ದಿನವನ್ನೂ ಘೋಷಣೆ ಮಾಡಬೇಕು. ನವೆಂಬರ್‌ 1 ಅನ್ನು ದೇಶದಾದ್ಯಂತ ಕನ್ನಡ ದಿನವಾಗಿ ಆಚರಿಸಬೇಕು ಎಂದು ಹೆಚ್​.ಡಿ ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರಕ್ಕೆ ತಿಳಿಸಿದ್ದಾರೆ.

Post a Comment

Previous Post Next Post