ನಟಿ ರಾಧಿಕಾ ಕುಮಾರಸ್ವಾಮಿ ತಮ್ಮ ಚಿತ್ರ ಸ್ವೀಟಿ ನನ್ನ ಜೋಡಿ ಯನ್ನು ಕಿಡಿಗೇಡಿಗಳು ಅವರ ಅನುಮತಿ ಇಲ್ಲದೇ ಅಪ್ಲೋಡ್ ಮಾಡಿದ್ದರು. ಈ ಬಗ್ಗೆ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಟಿ ರಾಧಿಕಾ ಕುಮಾರಸ್ವಾಮಿ ದೂರು ನೀಡಿದ್ದಾರೆ.
ದೂರಿನಲ್ಲಿ ಏನಿದೆ?
ಸುಮಾರು ಮೂರು ಕೋಟಿ ವೆಚ್ಚದಲ್ಲಿ ‘ಸ್ವೀಟಿ ನನ್ನ ಜೋಡಿ’ ಕನ್ನಡ ಸಿನಿಮಾವನ್ನು ನಿರ್ಮಿಸಲಾಗಿತ್ತು. ಆದರೆ ಯಾರೋ ಅಪರಿಚಿತರು ಸಿನಿಮಾ ವಿಡಿಯೋವನ್ನು ನನ್ನ ಅನುಮತಿ ಪಡೆಯದೆ ಹಾಗೂ ಗಮನಕ್ಕೆ ತರದೆ ಯೂಟ್ಯೂಬ್‍ನಲ್ಲಿ ಸಿನಿಮಾವನ್ನು ಅಪ್ಲೋಡ್ ಮಾಡುವ ಮೂಲಕ ಪೈರಸಿ ಮಾಡಿದ್ದಾರೆ. ಹೀಗಾಗಿ ಸಿನಿಮಾ ಅಪ್ಲೋಡ್ ಮಾಡಿದ ಕಿಡಿಗೇಡಿಗಳ ವಿರುದ್ಧ ಕ್ರಮ ಜರುಗಿಸುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.
Tags
ಸಿನಿಮಾ