ಹಾಸನ: ಹಾಸನ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ವೇತಾದೇವರಾಜ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ.
ಇತ್ತೀಚೆಗಷ್ಟೇ ಜೆಡಿಎಸ್ ಅರಸೀಕೆರೆ ಶಾಸಕ ಶಿವಲಿಂಗೇಗೌಡ, ಹೊಳೆನರಸೀಪುರ ಶಾಸಕ ಹೆಚ್‍ಡಿ ರೇವಣ್ಣ ಹಾಗೂ ಬೇಲೂರು ಶಾಸಕ ಲಿಂಗೇಶ್ ಹಾಗೂ ಹಾಸನ ಜಿಲ್ಲಾ ಉಸ್ತವಾರಿ ಸಚಿವ ಕೆಮ ಗೋಪಾಲಯ್ಯ ಅವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು.
ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ವೇತಾದೇವರಾಜ್
ತಲೆನೋವು ಬಿಟ್ಟು ಬೇರೆ ರೋಗ ಲಕ್ಷಣ ಇಲ್ಲದ ಕಾರಣ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದೇನೆ. ನಾನು ಆರೋಗ್ಯವಾಗಿದ್ದೇನೆ.. ಎಲ್ಲರೂ ಕೊರೋನ ಸುರಕ್ಷತಾ ನಿಯಮ ಪಾಲಿಸಿ ಎಂದ ಅವರು ಯಾವುದೇ ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಹಾಗೂ ಕ್ವಾರಂಟೈನ್‍ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ವಿನಂತಿಸಿಕೊಳ್ಳುತ್ತೇನೆ ಮನವಿ ಮಾಡಿದ್ದಾರೆ.
Tags
ಹಾಸನ