ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ಭೂ-ಸುಧಾರಣೆ ತಿದ್ದುಪಡಿ ವಿಧೇಯಕದ ವಿರುದ್ಧ ರಾಜ್ಯದ ರೈತ ಸಂಘಗಳು ಹಾಗೂ ವಿವಿಧ ಸಂಘಟನೆಗಳು ಹಮ್ಮಿಕೊಂಡಿರುವ ನಾಳಿನ ಕರ್ನಾಟಕ ಬಂದ್ಗೆ ಜೆಡಿಎಸ್ ಬೆಂಬಲ ಸೂಚಿಸಿದೆ.
ರಾಜ್ಯ ಸರ್ಕಾರ ಜಾರಿ ಮಾಡಿರುವ ಭೂ-ಸುಧಾರಣೆ ತಿದ್ದುಪಡಿ ಕಾಯ್ದೆ ವಿರುದ್ಧ ರಾಜ್ಯದ ರೈತ ಸಂಘಗಳು ಹಾಗೂ ಅನೇಕ ಸಂಘಟನೆಗಳು ಹಮ್ಮಿಕೊಂಡಿರುವ ನಾಳಿನ ರಾಜ್ಯಾದ್ಯಂತ ಬಂದ್ ಗೆ ನಮ್ಮ ಜೆಡಿಎಸ್ ಪಕ್ಷದ ಸಂಪೂರ್ಣ ಬೆಂಬಲವಿರುತ್ತದೆ ಎಂದು ಮಾಧ್ಯಮಗಳ ಮುಖೇನ ತಿಳಿಸಲು ಇಚ್ಛೆಪಡುತ್ತೇನೆ.
-ಹೆಚ್.ಡಿ. ದೇವೇಗೌಡ, ಮಾಜಿ ಪ್ರಧಾನ ಮಂತ್ರಿ
ಇನ್ನು ಈ ಬಗ್ಗೆ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಶ್ರೀಕಂಠೇ ಗೌಡ ನ್ಯೂಸ್ಫಸ್ಟ್ ಜೊತೆ ಮಾತನಾಡಿ.. ರೈತ ವಿರೋಧಿ ಕಾನೂನುಗಳ ವಿರುದ್ಧ ಮೊದಲು ಧ್ವನಿ ಎತ್ತಿದವರು ದೇವೇಗೌಡರು. ನಾಳೆ ಕರ್ನಾಟಕ ಬಂದ್ಗೆ ಜೆಡಿಎಸ್ನಿಂದ ಸಂಪೂರ್ಣ ಬೆಂಬಲ ಇದೆ. ರೈತರ ಹೋರಾಟಕ್ಕೆ ಎಲ್ಲಾ ರೀತಿಯ ಬೆಂಬಲ ನೀಡಲು ನಾವು ಸಿದ್ಧರಿದ್ದೇವೆ. ಈ ಬಗ್ಗೆ ಎರಡು ಸದನದಲ್ಲಿ ನಾವು ಕೂಡ ನಿರಂತರ ಹೋರಾಟ ಮಾಡುತ್ತ ಬಂದಿದ್ದೇವೆ. ಸರ್ಕಾರ ಮಸೂದೆಯನ್ನು ವಾಪಸ್ ಪಡೆಯುವವರೆಗೂ ವಿರೋಧಿಸುತ್ತೇವೆ ಎಂದಿದ್ದಾರೆ.
Tags
ರಾಜ್ಯ