ರಾಜ್ಯ ಸರ್ಕಾರವು ಭೂ ಸುಧಾರಣಾ ತಿದ್ದುಪಡಿ ಮಸೂದೆ ಮತ್ತು ಎಪಿಎಂಸಿ ತಿದ್ದುಪಡಿ ಮಸೂದೆಯನ್ನು ಜಾರಿಗೆ ತರಲು ಮುಂದಾಗಿರುವ ಕ್ರಮವನ್ನು ಖಂಡಿಸಿ ದಿನಾಂಕ : 28-09-2020 ರಂದು ವಿವಿಧ ರೈತ ಸಂಘಟನೆಗಳು ಕಾರ್ಮಿಕ ಸಂಘಟನೆಗಳು ಮತ್ತು ದಲಿತ ಸಂಘಟನೆಗಳು ಸೇರಿದಂತೆ ಐಕ್ಯ ಹೋರಾಟ ಸಮಿತಿಯು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು , ಈ ಪ್ರತಿಭಟನೆಯಲ್ಲಿ ಭಾಗವಹಿಸುವ ಪ್ರತಿಭಟನಾಕಾರರು ಕಾನೂನು ಮತ್ತು ಸುವ್ಯವಸ್ಥೆಗೆ , ಸಂಚಾರ ವ್ಯವಸ್ಥೆಗೆ ತೊಂದರೆಯಾಗದಂತೆ ನೋಡಿಕೊಳ್ಳುವುದು .
ಪ್ರತಿಭಟನೆ ನಡೆಯುವ ಸಮಯದಲ್ಲಿ ಯಾವುದೇ ರೀತಿಯ ಗಲಭೆ / ಗಲಾಟೆ ಸಾರ್ವಜನಿಕರ ಆಸ್ತಿ ನಷ್ಟ ಇನ್ನಿತರೆ ಅಹಿತಕರ ಘಟನೆಗಳು ನಡೆದಲ್ಲಿ ಹಾಗೂ ಯಾರಾದರೂ ಕಿಡಗೆಡಿಗಳು ಟೈರಿಗೆ ಬೆಂಕಿ ಹಚ್ಚುವುದು . ಕೆಎಸ್‌ಆರ್‌ಟಿಸಿ ಬಸ್‌ಗೆ ಕಲ್ಲು ತೂರುವುದು ಮತ್ತು ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುವಂತೆ ಒತ್ತಾಯ ಮಾಡಿ ಗಲಾಟೆ ನಡೆದು ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡಿದಲ್ಲಿ ಸಂಬಂಧಪಟ್ಟ ಸಂಘಟನೆಯವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು . ಸಧ್ಯದ ಪರಿಸ್ಥಿತಿಯಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗವು ರಾಜ್ಯದಲ್ಲಿ ಹೆಚ್ಚಾಗಿ ಹರಡುತ್ತಿದ್ದು , ಹಾಗೂ ಜಿಲ್ಲೆಯಲ್ಲಿಯೂ ಸಹ ಹೆಚ್ಚಾಗಿ ಹರಡುತ್ತಿದೆ . ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟುವ ಸಲುವಾಗಿ ರಾಜ್ಯ ಸರ್ಕಾರವು ಕೆಲವೊಂದು ಮಾರ್ಗಸೂಚಿಗಳನ್ನು ಹೊರಡಿಸಿದ್ದು , ಆ ಮಾರ್ಗಸೂಚಿಯ ಪ್ರಕಾರ ಪ್ರತಿಭಟನಾಕಾರರು ಕಡ್ಡಾಯವಾಗಿ ಮಾಸ್ಕನ್ನು ಧರಿಸಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು . ಒಂದು ವೇಳೆ ಮಾರ್ಗಸೂಚಿಯನ್ನು ಉಲ್ಲಂಘನೆ ಮಾಡಿದಲ್ಲಿ ಸಂಬಂಧಿಸಿದವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಲಾಗಿದೆ ಯಾವುದೆ ರೀತಿಯ ಅಹಿತಕರ ಘಟನೆ ನಡೆಯದಂತೆ ಶಾಂತರೀತಿಯಿಂದ ಪ್ರತಿಭಟನೆ ನಡೆಸುವಂತೆ ಜಿಲ್ಲಾ ಪೊಲೀಸ್ ವತಿಯಿಂದ ಸೂಚಿಸಲಾಗಿದೆ .
Tags
ಹಾಸನ