ಹಾಸನ:-ಜಿಲ್ಲಾ ಉಸ್ತುವಾರಿ ಹಾಗೂ ಆಹಾರ ಸರಬರಾಜು ಮತ್ತು ನಾಗರಿಕ ವ್ಯವಹಾರಗಳ ಸಚಿವರಾದ ಕೆ ಗೋಪಾಲಯ್ಯ ಅವರಿಗೆ ಕರೋನ ಸೋಂಕುದೃಢಪಟ್ಟಿದೆ
ಈ ವಿಚಾರವಾಗಿ ಸ್ವತಃ ಸಚಿವರೇ ಇಂದು ಸಂಜೆ ಸಾಮಾಜಿಕ ಜಾಲತಾಣದ ಬಗ್ಗೆ ಮಾಹಿತಿ ನೀಡಿದ್ದು ರೋಗ ಲಕ್ಷಣಗಳಿಲ್ಲದಿದ್ದರೂ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದು ಕಳೆದ ಒಂದು ವಾರದಿಂದ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಕರೋನ ತಪಾಸಣೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.