ಬೆಂಗಳೂರು: ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಯಾಂಡಲ್ವುಡ್ ನಟ ಶರಣ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.
ಶರಣ್ ಅವರು ಇಂದು ಅವತಾರ ಪುರುಷ ಸಿನಿಮಾದ ಶೂಟಿಂಗ್ ವೇಳೆಯಲ್ಲಿ ಭಾಗವಹಿಸಿದ್ದರು, ಈ ವೇಳೆಯಲ್ಲಿ ಅವರಲ್ಲಿ ಅನಾರೋಗ್ಯ ಕಾಣಿಸಿಕೊಂಡಿದೆ. ಹೀಗಾಗಿ ಕ ಕೂಡಲೇ ಅವರನ್ನು ಮಲ್ಲಿಗೆ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಅಂತ ಪ್ರಾಥಮಿಕ ಮೂಲಗಳಿಂದ ತಿಳಿದು ಬಂದಿದೆ.
ಬೆಂಗಳೂರಿನಲ್ಲಿರುವ ಹೆಚ್ ಎಂಟಿ ಗ್ರೌಂಡ್ ನಲ್ಲಿಅವತಾರ ಪುರುಷ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಈ ವೇಳೆ ಶರಣ್ ಅವರಿಗೆ ತೀವ್ರವಾದ ಹೊಟ್ಟೆ ನೋವು ಕಾಣಿಸಿಕೊಂಡಿದೆ ಎನ್ನಲಾಗಿದ್ದು, ತಕ್ಷಣವೇ ಅವರನ್ನು ನಿರ್ದೇಶಕ ಸಿಂಪಲ್ ಸುನಿ ನತ್ತು ನಿರ್ಮಾಪಕರು ಆಸ್ಪತ್ರೆಗೆ ದಾಖಲಿಸಿದ್ದು ಹೆಚ್ಚಿನ ಮಾಹಿತಿಗಾಗಿ ಕಾಯಲಾಗುತ್ತಿದೆ.
Tags
ಸಿನಿಮಾ