ಸರ್ಕಾರಿ ಪದವಿ ಕಾಲೇಜಿನಲ್ಲಿ ಪ್ರವೇಶಾತಿಗೆ ಸಚಿವರ ಸೂಚನೆ

ಹಾಸನ:- ಹೆತ್ತೂರು ಸರ್ಕಾರಿ ಪದವಿ ಕಾಲೇಜಿನಲ್ಲಿ ಕೂಡಲೇ ವಿದ್ಯಾರ್ಥಿಗಳ ಪ್ರವೇಶಾತಿಗೆ ಕ್ರಮಕೈಗೊಳ್ಳುವಂತೆ ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ|| ಅಶ್ವತ್ ನಾರಾಯಣ್ ಅವರು ಕಾಲೇಜು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 
ಆಲೂರು-ಸಕಲೇಶಪುರ ಕ್ಷೇತ್ರದ ಶಾಸಕರಾದ ಹೆಚ್.ಕೆ. ಕುಮಾರಸ್ವಾಮಿ ಅವರು ವಿಧಾನ ಸಭೆಯಲ್ಲಿಂದು ಹೆತ್ತೂರು ಸರ್ಕಾರಿ ಪದವಿ ಕಾಲೇಜು ಸ್ಥಳಾಂತರ ವಿಷಯ ಕುರಿತು ಪ್ರಸ್ತಾಪಿಸಿದರು. ರಾಜ್ಯ ಉಚ್ಛನ್ಯಾಯಾಲಯದ ತಡೆಯಾಜ್ಞೆ ಇದ್ದರೂ ಕೂಡ ಈ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸುತ್ತಿಲ್ಲ ಈ ಬಗ್ಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಕೋರಿದರು. 
ಇದಕ್ಕೆ ಉತ್ತರಿಸಿದ ಸಚಿವರು ಇಂದಿನಿಂದ ವಿದ್ಯಾರ್ಥಿಗಳನ್ನು ಕಾಲೇಜಿಗೆ ಪ್ರವೇಶ ಮಾಡಿಸಿಕೊಳ್ಳುವಂತೆ ಕಾಲೇಜು ಶಿಕ್ಷಣ ಇಲಾಖೆಗೆ ಆದೇಶ ನೀಡಲಾಗಿದೆ ಎಂದು ತಿಳಿಸಿದರು.

Post a Comment

Previous Post Next Post