ಕೋವಿಡ್ ಸೋಂಕಿಗೆ ಬಲಿಯಾದ ಯುವ ಪತ್ರಕರ್ತ.


ಪ್ರಸಿದ್ದ ಕನ್ನಡ ದಿನಪತ್ರಿಕೆ ಪ್ರಜಾವಾಣಿ ಇದರ ಮೈಸೂರು ವರದಿಗಾರರಾದ ಪವನ್ ಹೆತ್ತೂರು(35) ಅವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಉತ್ಸಾಹಭರಿತ ಪತ್ರಕರ್ತರಾಗಿದ್ದ ಸಕಲೇಶಪುರ ಮೂಲದ ಪವನ್ ಅವರು ವಿಜಯವಾಣಿ, ಕಸ್ತೂರಿ ಟಿವಿಯಲ್ಲಿ ಕೆಲಸ ಮಾಡಿದ್ದರು. ಪ್ರಸ್ತುತವಾಗಿ ಪ್ರಜಾವಾಣಿ ಮೈಸೂರು ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.

ಕೊರೊನಾ ಸೋಂಕು ಪಾಸಿಟಿವ್ ಬಂದಿದ್ದ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ಪವನ್ ಪತ್ನಿ, ಇಬ್ಬರು ಚಿಕ್ಕ ಮಕ್ಕಳನ್ನು ಅಗಲಿದ್ದು , ಮೃತರ ಅಂತ್ಯಕ್ರಿಯೆ ಹಾಸನ ಜಿಲ್ಲೆ ಸಕಲೇಶಪುರದ ತಾಲೂಕಿನ ಹೆತ್ತೂರಿನಲ್ಲಿ ನಡೆಯಲಿದೆ.

Post a Comment

Previous Post Next Post