ಹಾಸನ, ಅ.15- ಭಾರತೀಯ ವೈದ್ಯಕೀಯ ಸಂಘದ (ಐಎಂಎ) ಜಿಲ್ಲಾ ಶಾಖೆ ಹಮ್ಮಿಕೊಂಡಿರುವ ‘ಮಾಸ್ಕ್ ಧರಿಸಿ-ಕರೋನಾ ಓಡಿಸಿ’ ಅಭಿಯಾನದ ಜನ ಜಾಗೃತಿ ಸಪ್ತಾಹದ ಅಂಗವಾಗಿ ಇಂದು ನಗರದ ರಿಂಗ್ ರಸ್ತೆಯಿಂದ ಮಹಾವೀರ ವೃತ್ತದವರೆಗೆ ಸೈಕಲ್ ಜಾಥಾ ನಡೆಸಲಾಯಿತು.
ಜಾಥಾ ಉದ್ಘಾಟಿಸಿ ಮಾತನಾಡಿದ ಐಎಂಎ ಜಿಲ್ಲಾ ಶಾಖೆ ಅಧ್ಯಕ್ಷ ಡಾ. ಎನ್. ರಮೇಶ್ ಅವರು, ಕೊರೋನಾ ನಿಯಂತ್ರಣಕ್ಕೆ ಎಸ್‌ಎಂಎಸ್ ನಿಯಮ ಪಾಲನೆಯೇ ಮದ್ದು. ಎಸ್-ಸಾಮಾಜಿಕ ಅಂತರ, ಎಂ-ಮಾಸ್ಕ್ ಮತ್ತು ಎಸ್-ಸ್ಯಾನಿಟೈಸರ್ ಅಥವಾ ಸೋಪಿನಿಂದ ಕೈತೊಳೆಯುವುದು. ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಮಾತ್ರ ಸಮುದಾಯದಲ್ಲಿ ಕೊರೋನಾ ಸೋಂಕು ಹರಡುವಿಕೆಯನ್ನು ನಿಯಂತ್ರಿಸಿ ಸಾವಿನ ಸಂಖ್ಯೆ ಕಡಿಮೆ ಮಾಡಲು ಸಾಧ್ಯ ಎಂದು ತಿಳಿಸಿದರು.
ಸೋಂಕು ಹರಡುವಿಕೆ ಹೆಚ್ಚಾದರೆ, ಎಲ್ಲಾ ರೋಗಿಗಳಿಗೂ ಸೂಕ್ತ ಸಮಯದಲ್ಲಿ ಸರಿಯಾದ ಚಿಕಿತ್ಸೆ ನೀಡಲು ಸಾಧ್ಯವಾಗದೆ ಭೀಕರ ಪರಿಸ್ಥಿತಿ ನಿರ್ಮಾಣವಾಗುವ ಅಪಾಯವಿದೆ. ಆದ್ದರಿಂದ ಪ್ರತಿಯೊಬ್ಬರೂ ಕೊರೋನಾ ವಾರಿಯರ್‌ಗಳಾಗಿ ಬದಲಾಗಿ ಸಾಮಾಜಿಕ ಜವಾಬ್ದಾರಿ ಅರಿತು ಕೊರೋನಾ ನಿಯಂತ್ರಣಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ರಿಂಗ್ ರಸ್ತೆಯಿಂದ ಮಹಾವೀರ ವೃತ್ತದವರೆಗೆ ಸೈಕಲ್ ಜಾಥಾ ನಡೆಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. ಐಎಂಎ ಜಿಲ್ಲಾ ಶಾಖೆಯ ಕಾರ್ಯದರ್ಶಿ ಡಾ. ಬಿ.ಜಿ. ವಾಗೀಶ್ ಭಟ್, ಖಜಾಂಚಿ ಡಾ. ತೇಜಸ್ವಿ, ಜನಪ್ರಿಯ ಆಸ್ಪತ್ರೆಯ ವೈದ್ಯ ಡಾ. ಅಬ್ದುಲ್ ಬಷೀರ್ ಹಾಗೂ ರೋಟರಿ ಮಿಡ್ ಟೌನ್ ಮತ್ತು ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಪದಾಧಿಕಾರಿಗಳು ಸೈಕಲ್ ಜಾಥಾದಲ್ಲಿ ಭಾಗವಹಿಸಿದ್ದರು.

Tags
ಹಾಸನ