ದರ್ಶನ್ ಅಭಿನಯದ ಬಹುನಿರೀಕ್ಷೆಯ 'ರಾಬರ್ಟ್' ಚಿತ್ರ ಬಿಡುಗಡೆಗೆ ಡೇಟ್ ಫಿಕ್ಸ್

ಡಿ ಬಾಸ್ ತನ್ನ ಅಭಿಮಾನಿಗಳಿಗೆ ಸಂತೋಷದ ಸುದ್ದಿಯೊಂದನ್ನು ನೀಡಿದ್ದಾರೆ. ಅದೇನೆಂದರೆ ದರ್ಶನ್ ಅಭಿನಯದ ಬಹುನಿರೀಕ್ಷೆಯ 'ರಾಬರ್ಟ್' ಚಿತ್ರ ಬಿಡುಗಡೆಗೆ ಡೇಟ್ ಫಿಕ್ಸ್ ಆಗಿದೆ.

ಇದೇ ಡಿಸೆಂಬರ್ 25 ರಂದು 'ರಾಬರ್ಟ್' ತೆರೆಕಾಣಲಿದೆ. ಕೊರೊನಾ ಕಾರಣದಿಂದ ಚಿತ್ರರಂಗಕ್ಕೆ ಸಂಬಂಧಿಸಿದ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ನಿಧಾನವಾಗಿ ಚಿತ್ರೀಕರಣ ಆರಂಭವಾಗಿ ನಂತರದಲ್ಲಿ ಸಿನಿಮಾ ಥಿಯೇಟರ್ ಗಳು ಆರಂಭವಾಗುತ್ತಿವೆ. ಡಿಸೆಂಬರ್ ವೇಳೆಗೆ ಪ್ರೇಕ್ಷಕರ ಸಂಖ್ಯೆಯಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ.
ಹಾಗಾಗಿ ಡಿಸೆಂಬರ್ 25 ರಂದು 'ರಾಬರ್ಟ್' ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಚಿತ್ರ ಐದಾರು ತಿಂಗಳ ಹಿಂದೆಯೇ ಬಿಡುಗಡೆಯಾಗಬೇಕಿತ್ತು. ಆರಂಭದಿಂದಲೂ ಭಾರೀ ನಿರೀಕ್ಷೆ ಮೂಡಿಸಿರುವ 'ರಾಬರ್ಟ್' ಬಿಡುಗಡೆ ಸುದ್ದಿ ದರ್ಶನ್ ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ.

ಈಗಾಗಲೇ ಧ್ರುವ ಸರ್ಜಾ ಅಭಿನಯದ ಚಿತ್ರ ಕರಾಬು ಸಹ ಅದೇ ದಿನ ಬಿಡುಗಡೆಯಾಗುವ ಸಾಧ್ಯತೆ ಇದೆ. ಹೀಗಾಗಿ ಎರಡೂ ಚಿತ್ರಗಳ ಮಧ್ಯೆ ಪೈಪೋಟಿ ನಡೆಯಲಿದೆ.

Post a Comment

Previous Post Next Post