ದೀಪಾಲಂಕಾರದಿಂದ ಕಂಗೊಳಿಸುತ್ತಿದೆ ಮೈಸೂರಿನ ರೈಲ್ವೆ ಮ್ಯೂಸಿಯಂ



ಮೈಸೂರು:ಅ,15: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ರೈಲ್ವೆ ಮ್ಯೂಸಿಯಂ ವಿದ್ಯುತ್ ದೀಪಗಳೊಂದಿಗೆ ಝಗಮಗಿಸುತ್ತಿದೆ. ರೈಲ್ವೆ ಮ್ಯೂಸಿಯಂನ ಹೊರಾಂಗಣ ಮತ್ತು ಒಳಾಂಗಣದಲ್ಲಿ ವಿಶೇಷ ಎಲ್ ಇಡಿ ದೀಪಾಲಂಕಾರ ಮಾಡಲಾಗುತ್ತಿದೆ. ಉಗಿಬಂಡಿ, ಟಾಯ್ ರೈಲು, ರೈಲ್ ಬಸ್, ತರಬೇತಿ ಬೋಗಿಗಳಿಗೆ ದೀಪಾಲಂಕಾರ ಮಾಡಲಾಗಿದ್ದು, ಅ.17 ರಿಂದ 26ರವರೆಗೆ ದೀಪಾಲಂಕಾರದ ವ್ಯವಸ್ಥೆ ಇರಲಿದೆ. ಬೆಳಿಗ್ಗೆ 10 ರಿಂದ ರಾತ್ರಿ 8 ಗಂಟೆಯವರೆಗೆ ಪ್ರವಾಸಿಗರು ಭೇಟಿ ನೀಡಲು ಅವಕಾಶವನ್ನು ಕಲ್ಪಿಸಲಾಗಿದೆ. ದೊಡ್ಡವರಿಗೆ 50 ರೂ., 5-12 ವರ್ಷದ ಮಕ್ಕಳಿಗೆ 20 ರೂ. ಪ್ರವೇಶ ಶುಲ್ಕವಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಕಾರ್ಯಸೌಧ ಕ್ರಾಫರ್ಡ್ ಭವನವೂ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಕ್ರಾಫರ್ಡ್ ಭವನದ ಆವರಣದಲ್ಲಿರುವ ಗಿಡಗಳ ಮೇಲೆ ಸಣ್ಣ ವಿದ್ಯುತ್ ದೀಪಗಳನ್ನು ಹಾಕಲಾಗಿದೆ. ದಸರಾ ಹಿನ್ನೆಲೆಯಲ್ಲಿ ನಗರದ ಪ್ರಮುಖ ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

Post a Comment

Previous Post Next Post