ಕೋರ್ಟ್ ಆದೇಶಕ್ಕೆ ಜೆಡಿಎಸ್ ಜೈಕಾರ



ಅರಸಿಕೆರೆ: ನಗರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಗೆ ಹೈಕೋರ್ಟ್ ತಡೆ ನೀಡಿ ಆದೇಶ ಹೊರಡಿಸಿದ ಹಿನ್ನೆಲೆ ನಗರದ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಪಿಪಿ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. 
ಸುಮಾರು 2 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ನಗರಸಭೆಯ ಅಧ್ಯಕ್ಷ ಸ್ವಾನದ ಮೀಸಲಾತಿ ಪ್ರಕಟಣೆ ನ್ಯಾಯಾಲಯದಲ್ಲಿದ್ದ ಕಾರಣ ಅಧ್ಯಕ್ಷ ಉಪಾಧ್ಯಕ್ಷ ಗಾದಿಗಾಗಿ ಭಾರೀ ನಿರೀಕ್ಷೆಯಲ್ಲಿದ್ದವರಿಗೆ ಮೀಸಲಾತಿ ಪಟ್ಟಿ ಪ್ರಕಟವಾಗಿ ಸಂತಸದಲ್ಲಿದ್ದರು. ಇದೇ ಸಂದರ್ಭದಲ್ಲಿ ಅಧಿಕಾರ ನಡೆಸುವ ಬಹುಮತವಿದ್ದರೂ ಸಹ ಅಧಿಕಾರದಿಂದ ವಂಚಿತರಾದ ಜೆಡಿಎಸ್ ಸದಸ್ಯರು ಸರಕಾರ ಮೀಸಲಾತಿ ನಿಗದಿಯಲ್ಲಿ ಅನ್ಯಾಯ ಮಾಡಲಾಗಿದೆ ಎಂದು  ನ್ಯಾಯಾಲಯದ ಮೊರೆ ಹೋಗಿದ್ದರು ಇಂದು ವಿಚಾರಣೆ ನಡೆಸಿದ ಹೈ ಕೋರ್ಟ ರಾಜ್ಯದ ಎಲ್ಲಾ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಗೆ ತಡೆ ನೀಡಿ ಆದೇಶ ಹೊರಡಿಸಿದ ಕಾರಣ ನಗರದ ಪಿಪಿ ವೃತ್ತದಲ್ಲಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

Post a Comment

Previous Post Next Post