ಆರೋಗ್ಯ ಸುರಕ್ಷತಾ ಕ್ರಮದೊಂದಿಗೆ ಕನ್ನಡ ರಾಜ್ಯೋತ್ಸವ ಆಚರಿಸಲು ನಿರ್ಧಾರ

ಹಾಸನ,ಅ.16:- ಕೋವಿಡ್-19 ಹಿನ್ನಲೆಯಲ್ಲಿ ಆರೋಗ್ಯ ಸುರಕ್ಷತಾ ಕ್ರಮದೊಂದಿಗೆ ಈ ವರ್ಷವೂ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಮಿತಿ ಸಭೆಯಲ್ಲಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಕವಿತ ರಾಜರಾಂ ಅವರು ಕೋವಿಡ್-19 ಆತಂಕಗಳ ನಡುವೆ ಶಿಷ್ಠಾಚಾರಕ್ಕೆ ಯಾವುದೇ ಕುಂದು ಬರದಂತೆ ರಾಜ್ಯೋತ್ಸವವನ್ನು ಆಚರಿಸೋಣ ಎಂದು ಹೇಳೀದರು.
ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಧ್ವಜರೋಹಣ ನೆರವೇರಿಸಿ ಸಂದೇಶ ನೀಡಲಿದ್ದಾರೆ ಇತರ ಎಲ್ಲಾ ಜನಪ್ರತಿನಿಧಿಗಳೂ ಸಹ ಹಾಜರಿರಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ, ಶಾಲಾ ವಿದ್ಯಾರ್ಥಿಗಳು ಭಾಗವಹಿಸುವಂತಿಲ್ಲ. ಸಾರ್ವಜನಿಕರು ಇಚ್ಚಿಸಿದಲ್ಲಿ ಸ್ವಯಂ ಪ್ರೇರಣೆಯಿಂದ ಪಾಲ್ಗೊಳ್ಳಬಹುದಾಗಿದೆ. ಅಧಿಕಾರಿ ಸಿಬ್ಬಂದಿಗಳು ಕಡ್ಡಾಯವಾಗಿ ಸಮಾರಂಭದಲ್ಲಿ ಭಾಗವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಹೇಳಿದರು. 
ಪ್ರತಿ ವರ್ಷದ ಸಂಪ್ರದಾಯದಂತೆ ಕಾರ್ಯಕ್ರಮಗಳು ನಡೆಯಲಿದ್ದು, ವಿವಿಧ ಕ್ಷೇತ್ರಗಳಲ್ಲಿನ ಸಾಧಕರಿಗೆ ಸನ್ಮಾನಿಸಲಾಗುವುದು ಹಾಗೂ ಕೋವಿಡ್ ವಾರಿಯರ್ಸ್‍ಗಳಿಗೂ ಕೂಡ ಗೌರವ ಸಲ್ಲಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ತಿಳಿಸಿದರು.
ಎಲ್ಲಾ ಇಲಾಖಾ ಅಧಿಕಾರಿಗಳು ತಮಗೆ ಈ ಹಿಂದೆ ವಹಿಸಿದಂತೆ ಜವಬ್ದಾರಿಗಳನ್ನು ಯಾವುದೇ ಲೋಪವಿಲ್ಲದಂತೆ ನಿರ್ವಹಿಸಬೇಕು. ಲೋಕೋಪಯೋಗಿ ಇಲಾಖೆ, ನಗರಸಭೆ ಇಲಾಖೆಗಳ ವತಿಯಿಂದ ವೇಧಿಕೆ ನಿರ್ಮಾಣ ಮಾಡಬೇಕು ಹಾಗೂ ನವೆಂಬರ್ 5 ರಿಂದ ಹಾಸನಾಂಬ ಜಾತ್ರೆ ಇರುವುದರಿಂದ ಅ.31 ರಿಂದಲೇ ನಗರದ ಪ್ರಮುಖ ವೃತ್ತಗಳಲ್ಲಿ ನಗರಸಭೆ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದಿಂದ ದೀಪಾಲಂಕಾರ ಮಾಡಬೇಕು ಎಂದು ಅವರು ಹೇಳಿದರು.
ಉಪ ವಿಭಾಗಾಧಿಕಾರಿ ಬಿ.ಎ ಜಗದೀಶ್, ನಾಯಕರಹಳ್ಳಿ ಮಂಜೇಗೌಡ, ಸಮಾಜ ಸೇವಕರಾದ ಡಾ|| ಗುರುರಾಜ್ ಹೆಬ್ಬಾರ್, ಪತ್ರಿಕರ್ತ ಸಂಘದ ಅಧ್ಯಕ್ಷರಾದ ಪ್ರಸನ್ನ ಕುಮಾರ್, ಸ್ವಾತಂತ್ರ್ಯ ಹೋರಾಟಗಾರರಾದ ಹೆಚ್.ಎಂ ಶಿವಣ್ಣ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾಗ ಡಾ. ಎಂ.ಡಿ ಸುದರ್ಶನ್ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Post a Comment

Previous Post Next Post