ಹೊಳೆನರಸೀಪುರ:ಖಾಸಗಿ ಆಸ್ಪತ್ರೆಗಳು ಬಡ ವರನ್ನು ಸುಲಿಗೆ ಮಾಡುತ್ತಿದ್ದಾರೆ, ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೆ ಬಡವರ ಪಾಲಿಗೆ ಮಾರಕವಾಗಿದ್ದಾರೆ ಎಂದು ಶಾಸಕ ಹೆಚ್.ಡಿ.ರೇವಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಟ್ಟಣದ ಶಿಕ್ಷಕರ ಭವನದಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಯಿತ್,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಂಗ್ರ ಶಿಶು ಅಭಿವೃದ್ಧಿ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ ಪೋಷಣ್ ಅಭಿಯಾನ ಯೋಜನೆ ಯಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಫೋನ್ ಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಇಂದಿನ ಸರ್ಕಾರ ಸರ್ಕಾರಿ ಆಸ್ಪತ್ರೆಗಳಲ್ಲಿ ಬಡವರಿಗೆ ಉತ್ತಮವಾದ ಚಿಕಿತ್ಸೆ ನೀಡಲು ಸೌಲಭ್ಯ ವನ್ನು ಒದಗಿಸಲು ಮೀನಾಮೇಶ ಎಣಿಸುತ್ತಿದೆ, ಇದರ ಪರಿಣಾಮವಾಗಿ ಖಾಸಗಿ ಆಸ್ಪತ್ರೆಗಳು ಬಡವರಿಂದ ಹಣ ಸುಲಿಗೆ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಅಂಗನವಾಡಿ ಕಾರ್ಯಕರ್ತೆ ಯರಿಗೆ ದಿನಕ್ಕೆ 310 ರೂ ನಂತೆ ಸಂಭಳ ನೀಡಲಾಗುತ್ತಿದೆ. ದಿನಪೂರ್ತಿ ಕೆಲಸ ನಿರ್ವಹಿಸುವ ಇವರಿಗೆ ಕನಿಷ್ಠ ಹಣದಿಂದ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ. ಕೂಲಿ ಮಾಡುವವರು ದಿನಕ್ಕೆ ಸಾವಿರಾರು ರೂಪಾಯಿ ಗಳಿಸುತ್ತಾರೆ. ಆದ್ದರಿಂದ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡುವ ವೇತನದಲ್ಲಿ ಹೆಚ್ಚಳ ಮಾಡಬೇಕು.ಅವರ ರಕ್ಷಣೆಗೆ ಮುಂದಾಗಬೇಕು ಎಂದು ಸರ್ಕಾರ ಕ್ಕೆ ಒತ್ತಾಯಿಸಿದ್ದಾರೆ.
ಕೊರೊನ ಹೆಚ್ಚಾಗಿದೆ ತುಂಬಾ ಎಚ್ಚರಿಕೆ ವಹಿಸಬೇಕು. ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಹಾಗೂ ಗ್ರಾಮದ ಮಕ್ಕಳ ಆರೋಗ್ಯದ ದೃಷ್ಟಿಯಿಂದ ನಿಗಾವಹಿಸಿ ಕರ್ತ್ಯವ್ಯ ನಿರ್ವಹಿಸಬೇಕೆಂದು ಸಲೆಹೆ ನೀಡುದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ಧ ಜಿಲ್ಲಾ ಪಂಚಾಯತ್ ಸದಸ್ಯೆ ಹಾಗೂ ಆರೋಗ್ಯ ಮತ್ತು ಸ್ಥಾಯಿಸಮಿತಿ ಅಧ್ಯಕ್ಷೆ ಭವಾನಿರೇವಣ್ಣ ಅವರು ಮಾತನಾಡಿ ತಾಲೂಕಿನಲ್ಲಿ 263 ಅಂಗನವಾಡಿ ಕೇಂದ್ರಗಳಿವೆ. ಮೊಬೈಲ್ ಬಳಕೆಯಿಂದ ಅಂಗನವಾಡಿ ಕಾರ್ಯಕರ್ತೆಯರು ಇಲಾಖೆಯ ಮಾಹಿತಿ ಗಳನ್ನು ತಿಳಿಯಲು ಸಹಾಯವಾಗುತ್ತದೆ. ನಾವೇ ಮೊದ್ಲು ಈ ಕಾರ್ಯ ಕ್ರಮ ನಡೆಸುತ್ತಿದ್ದೇವೆ ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.ಜ್ಯೋತೆಗೆ ನಿಮ್ಮ ಸಮಸ್ಯೆಗಳು ಏನೇ ಇದ್ದರು ನಾವು ನಿಮ್ಮ ಬೆಂಬಲಕ್ಕೆ ಇರುತ್ತೇವೆ ಎಂದರು.
ಇದೇ ಸಂದರ್ಭದಲ್ಲಿ ಶಾಸಕರು ಹಾಗೂ ಭವಾನಿ ರೇವಣ್ಣ ನವರು ಅಂಗನವಾಡಿ ಕಾರ್ಯಕರ್ತೆ ಯರಿಗೆ ಮೊಬೈಲ್ ಗಳನ್ನು ವಿತರಿಸಿದರು.
ತಾಲೂಕಿಗೆ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದಿರುವ ಶ್ರುತಿ ಕೆ ಎಸ್,ಯಶವಂತ್ ಎಂ, ಸುಹಾನಸುದಾಫ್ ಎಂಬ ವಿದ್ಯಾರ್ಥಿಗಳಿಗೆ ಲ್ಯಾಬಟಾಫ್ ವಿತರಣೆ ಮಾಡಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಶ್ರೀನಿವಾಸ ಕೆ ಆರ್ ,ತಾಲೂಕು ಪಂಚಾಯತ್ ಈ ಒ ಯೋಗೇಶ್ ಕೆ, ಕ್ಷೇತ್ರಶಿಕ್ಷಣಾಧಿಕಾರಿ ಲೋಕೇಶ್,ಜಿಲ್ಲಾ ಪಂಚಾಯಿತಿ ಎ ಇ ಇ ಪ್ರಭು ಮತ್ತು ಸಿಡಿಪಿಓ ಪ್ರಸನ್ನಕುಮಾರ್ ತಾ ಪಂ ಅಧ್ಯಕ್ಷೆ ಜಯಲಕ್ಷ್ಮಿ ಹಾಗೂ ನೂರಾರು ಅಂಗನವಾಡಿ ಕಾರ್ಯಕರ್ತೆ ಯರು ಉಪಸ್ಥಿತರಿದ್ದರು.