ಹನೂರು: ಇಲ್ಲಿನ ಹನೂರು ಪೊಲೀಸ್ ಠಾಣೆ ವತಿಯಿಂದ ಕೊರೊನಾ ಸೋಂಕು ತಡೆಗಟ್ಟುವುದು ಸೇರಿದಂತೆ ಪೋಕ್ಸೋ ಮತ್ತು ಬಾಲ್ಯ ವಿವಾಹದ ಬಗ್ಗೆ ಜನಾಂದೋಲನ ಅರಿವು ಕಾರ್ಯಕ್ರಮವನ್ನು ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಹನೂರು ಪೊಲೀಸ್ ಠಾಣೆಯ ಮುಖ್ಯ ಪೇದೆ ಗೋಪಾಲ ಹಾಗೂ ಮಹಿಳಾ ಪೇದೆ ಶೋಭ ಸಾರ್ವಜನಿಕರಿಗೆ ಪೋಕ್ಸೋ ಮತ್ತು ಬಾಲ್ಯ ವಿವಾಹ ಕೊರೊನಾ ಸೋಂಕು ತಡೆಗಟ್ಟುವ ವಿಚಾರದ ಬಗ್ಗೆ ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.