ಇಂದು ಬಂದ್​ಗೆ ಕರೆ ಕೊಟ್ಟವರಿಗೆ ಶಾಕ್ ಕೊಟ್ಟ ಹೈಕೋರ್ಟ್

ಬೆಂಗಳೂರು: ಕನ್ನಡ ಪರ ಸಂಘಟನೆಗಳು ನಾಳೆ ಬಂದ್​ಗೆ ಕರೆಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಬಂದ್​​ನಿಂದ ಆಗುವ ಆರ್ಥಿಕ ನಷ್ಟಕ್ಕೆ ಆಯೋಜಕರೇ ಹೊಣೆ.. ಬೀದಿ ಬದಿ ವ್ಯಾಪಾರಿಗಳಿಗಾಗುವ ನಷ್ಟಕ್ಕೂ ಆಯೋಜಕರೇ ಹೊಣೆ ಎಂದು ಸುಪ್ರೀಂ ಕೋರ್ಟ್ ತೀರ್ಪು ಉಲ್ಲೇಖಿಸಿ ಹೈಕೋರ್ಟ್ ಎಚ್ಚರಿಕೆ ನೀಡಿದೆ.


ಅಲ್ಲದೇ ಬಂದ್, ರ್ಯಾಲಿ ವೇಳೆ ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಮಾಡಿದ್ರೆ ಕಟ್ಟುನಿಟ್ಟಿನ ಕ್ರಮಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ವಾಟಾಳ್ ಪಕ್ಷ ಸೇರಿ ರಾಜಕೀಯ ಪಕ್ಷಗಳಿಗೆ ಹೈಕೋರ್ಟ್ ನೋಟಿಸ್ ನೀಡಿದ್ದು ಡಿಸೆಂಬರ್ 17 ರೊಳಗೆ ಪ್ರತಿಕ್ರಿಯೆ ಸಲ್ಲಿಸಲು ಪಕ್ಷಗಳಿಗೆ ತಾಕೀತು ಮಾಡಿದೆ.

ಅಷ್ಟೇ ಅಲ್ಲದೆ ಮಾಸ್ಕ್, ಸಾಮಾಜಿಕ ಅಂತರದ ಬಗ್ಗೆ ಪೊಲೀಸರು ನಿಗಾ‌ ಇಡಬೇಕು. ನಿಯಮಗಳನ್ನು ಉಲ್ಲಂಘಿಸಿದವರಿಂದ ಪೊಲೀಸರು ದಂಡ ಸಂಗ್ರಹಿಸಬೇಕು. ಸರ್ಕಾರ ಕೂಡಾ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಿಜೆ ಎ.ಎಸ್ ಒಕಾ ನೇತೃತ್ವದ ವಿಭಾಗೀಯ ಪೀಠ ನಿರ್ದೇಶನ ನೀಡಿದೆ.

ಲೆಟ್ಸ್ ಕಿಟ್ ಫೌಂಡೇಶನ್, ಸಾಯಿದತ್ತಾ ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆ ವೇಳೆ ಈ ಮೇಲ್ಕಂಡಂತೆ ಹೈಕೋರ್ಟ್ ಹೇಳಿದೆ.

Post a Comment

Previous Post Next Post