ಯಾವಪಕ್ಷದಲ್ಲೂ ಜೆಡಿಎಸ್ ವಿಲೀನ ಇಲ್ಲ- ಮೈತ್ರಿ ಅಷ್ಟೇ : ಎಚ್ ಡಿ ಕೆ

ನಾವು ಕನ್ನಡಿಗರ ಸ್ವಾಭಿಮಾನವನ್ನು ಅಡ ಇಡುವುದಿಲ್ಲ. ನಮ್ಮ ಯಾವ ಪಕ್ಷ ದಲ್ಲೂ ವಿಲೀನವಾಗುವ ಪ್ರಶ್ನೆಯೇ ಇಲ್ಲ. ಬದಲಿಗೆ ವಿಷಯಾಧಾರಿತ ಬೆಂಬಲ ಮೈತ್ರಿ ಮಾಡಿಕೊಳ್ಳಬಹುದು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸ್ಪಷ್ಟವಾಗಿ ಹೇಳಿದರು.
ಈ ಕುರಿತಂತೆ ಸರಣಿ ಟ್ವಿಟರ್ ನಲ್ಲಿ
ಜೆಡಿಎಸ್ ಸ್ವತಂತ್ರವಾಗಿಯೇ ಹೋರಾಟ ನಡೆಸಲಿದೆ. ಯಾವುದೇ ಪಕ್ಷದ ಜೊತೆ ವಿಲೀನ ಮಾಡುವ ಪ್ರಶ್ನೆಯೇ ಇಲ್ಲ ಎಂದು ವಿಲೀನ ವದಂತಿಯನ್ನು ಸಾರಾಸಗಟಾಗಿ ತಳ್ಳಿ ಹಾಕಿದರು

1973ರಲ್ಲಿ 22 ಜನ ಶಾಸಕರನ್ನು ಇಟ್ಟುಕೊಂಡು ಎಚ್.ಡಿ.ದೇವೇಗೌಡರು ವಿರೋಧ ಪಕ್ಷದ ನಾಯಕರಾಗಿ ಹೋರಾಟ ಆರಂಭಿಸಿದರು. ಕಾಂಗ್ರೆಸ್ ಹಾಗೂ ಜನತಾ ದಳ ಒಡೆದು ಹೋದ ಬಳಿಕ ಶ್ರಮಪಟ್ಟು ಪಕ್ಷವನ್ನು ಉಳಿಸಿಕೊಂಡು ಬಂದಿದ್ದೇವೆ. ರಾಜ್ಯದ ಸಮಸ್ಯೆಗಳಿಗೆ ಹೋರಾಟ ಮಾಡಿದ ದೇವೇಗೌಡರ ಕಳಕಳಿಯನ್ನು ಮುಂದುವರಿಸಿಕೊಂಡು ಹೋಗುತ್ತೇವೆ. ನಾವು ಸ್ವತಂತ್ರವಾಗಿರುವ ನಿಟ್ಟಿನಲ್ಲಿ ಪಕ್ಷವನ್ನು ಮುಂದುವರಿಸಿಕೊಂಡು ಹೋಗುತ್ತೇವೆ. ಯಾವುದೇ ಕಾರಣಕ್ಕೂ ಪಕ್ಷವನ್ನು ವಿಲೀನ ಮಾಡುವುದಿಲ್ಲ ಎಂದು ತಿಳಿಸಿದರು.

ದೇವೇಗೌಡರೊಂದಿಗೆ ಚರ್ಚಿಸಿ ನಿರ್ಧಾರ:

ಸಮ್ಮಿಶ್ರ ಸರ್ಕಾರ ಇದ್ದಾಗ ಕಾಂಗ್ರೆಸ್ ಜೊತೆ ಆಡಳಿತ ನಡೆಸಿದರೂ ಪ್ರಧಾನಿ ನರೇಂದ್ರ ಮೋದಿ, ನಾನು ಮುಖ್ಯಮಂತ್ರಿಯಾಗಿದ್ದಾಗ ಉತ್ತಮ ಸಹಕಾರ ನೀಡಿದರು. ಇದನ್ನೇ ಕೆಲವರು ಬೇರೆ ರೀತಿಯಲ್ಲಿ ವ್ಯಾಖ್ಯಾನ ಮಾಡುತ್ತಿದ್ದಾರೆ. ಬಸವರಾಜ್ ಹೊರಟ್ಟಿ ಹಾಗೂ ಜಿ.ಟಿ.ದೇವೇಗೌಡರು ಅವರ ವೈಯಕ್ತಿಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅದು ಪಕ್ಷದ ನಿರ್ಧಾರ ಅಲ್ಲ. ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ ಹಾಗೂ ನಮ್ಮ ಮುಖಂಡರು ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.

Post a Comment

Previous Post Next Post