ಹಾಸನಡಿ.30 (ಹಾಸನ ಸೀಮೆ ನ್ಯೂಸ್): ಮಹಿಳಾ ಅಭಿವೃದ್ದಿ ಕ್ಷೇತ್ರದಲ್ಲಿ ಐದು ವರ್ಷಗಳಿಂದ ಆದರ್ಶವಾಗಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ, ಹಾಗೂ ಕ್ರೀಡೆ, ಕಲೆ, ಸಾಹಿತ್ಯ, ಹಾಗೂ ಶಿಕ್ಷಣ, ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿ ವರ್ಷ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಪ್ರಶಸ್ತಿ ನೀಡಲಾಗುತ್ತಿದ್ದು ಕ್ಲಿಷ್ಟಕರ ಪರಿಸ್ಥಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಜೀವನೊಪಾಯದಿಂದ ಪಾರು ಮಾಡಿದಂತಹ (18ರಿಂದ 45ರ) ವಯೋಮಿತಿಯೊಳಗಿನ ಮಹಿಳೆಯರನ್ನು ಗುರುತಿಸಿ ಪ್ರಶಸ್ತಿಯನ್ನು ನೀಡಲಾಗುವುದು.
ಅರ್ಜಿ ನಮೂನೆಯನ್ನು ಉಪನಿರ್ದೆಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕೆ.ಆರ್ ಪುರಂ ಹಾಸನ ಇವರಿಂದ ಪಡೆದು ಜ.30 ರೊಳಗೆ ದ್ವಿ ಪ್ರತಿಯಲ್ಲಿ ಸಲ್ಲಿಸಬೇಕು ಹೆಚ್ಚಿನ ಮಾಹಿತಿಗಾಗಿ ದೂ.08172- 267218 ಗೆ ಸಂಪರ್ಕಿಸಬುಹುದಾಗಿದೆ.
Tags
ಹಾಸನ