ಕಡತದಲ್ಲಿನ ನ್ಯೂನ್ಯತೆಗೆ ಕ್ರಮ ಕೈಗೊಂಡು ವರದಿ ನೀಡಲು ಸೂಚನೆ

 
ಹಾಸನ ಡಿ.10:-  ಹೇಮಾವತಿ ಜಲಾಶಯ ಯೋಜನೆಯ ಮುಳುಗಡೆ ಸಂತ್ರಸ್ಥರಿಗೆ ಜಮೀನು ಮಂಜೂರು ಮಾಡುವ ವಿಚಾರದಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಭೂಸಂತ್ರಸ್ಥರಿಗೆ ಮೀಸಲಿರಿಸಲಾದ ಜಮೀನುಗಳನ್ನು ಕಾನೂನು ಬಾಹೀರವಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕರ್ತವ್ಯಲೋಪ ಎಸಗಿರುವ ಸಂಬಂಧ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ತೆಗೆದುಕೊಳ್ಳಬೇಕಾದ ಕ್ರಮ ಕುರಿತು  ರಾಜ್ಯ ಪುನರ್‍ವಸತಿ ಮತ್ತು ಪುನರ್ ನಿರ್ಮಾಣ ಆಯುಕ್ತರು ಹಾಗೂ ಕಂದಾಯ ಇಲಾಖೆ ಪದನಿಮಿತ್ತ ಸರ್ಕಾರದ ಕಾರ್ಯದರ್ಶಿಗಳಾದ  ಮೊಹಮ್ಮದ್ ಮೊಹಿಸಿನ್ ಅಧ್ಯಕ್ಷತೆಯಲ್ಲಿಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವರವಾದ ಚರ್ಚೆಯನ್ನು ನಡೆಸಲಾಯಿತು.
       ಪೂರಕವಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲಭ್ಯವಿರುವ ಎಲ್ಲಾ ಕಡತಗಳನ್ನು ಪರಿಶೀಲಿಸಿ ಸದರಿ ಕಡತದಲ್ಲಿ ನ್ಯೂನ್ಯತೆಗಳಿದ್ದಲ್ಲಿ ಪಟ್ಟಿ ಮಾಡಿ ನಿಯಮಾನುಸಾರ ಕ್ರಮ ಕೈಗೊಂಡು ವರದಿ ಸಲ್ಲಿಸಲು ಮೊಹಮ್ಮದ್ ಮೊಹಿಸಿನ್ ಅವರು ಅಧಿಕಾರಿಗಳಿಗೆ  ನಿರ್ದೇಶನ ನೀಡಿದ್ದಾರೆ. 
ಸಭೆಯಲ್ಲಿ ಜಿಲ್ಲಾಧಿಕಾರಿ ಆರ್ ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಮತ್ತು ಅಪರ ಜಿಲ್ಲಾಧಿಕಾರಿ ಕವಿತಾರಾಜಾರಾಂ ಉಪವಿಭಾಗಾಧಿಕಾರಿಗಳಾದ ಬಿ.ಎ ಜಗದೀಶ್, ಗಿರೀಶ್‍ನಂದನ್, ವಿಶೇಷ ಭೂಸ್ವಾಧೀನಾಧಿಕಾರಿಗಳು, ಹೇಮಾವತಿ ಜಲಾಶಯ ಯೋಜನೆ  ಹಾಸನ ಹಾಗೂ ಕರ್ನಾಟಕ ಸಾರ್ವಜನಿಕ ಜಮೀನುಗಳ ನಿಗಮ ನಿಯಮಿತ ಬೆಂಗಳೂರು ರವರ ಕಚೇರಿಯ ಅಧಿಕಾರಿಗಳು ಹಾಗು ಪೊಲೀಸ್ ತನಿಖಾಧಿಕಾರಿಗಳವರನ್ನು ಒಳಗೊಂಡಂತೆ ಇನ್ನಿತ್ತರರು ಹಾಜರಿದ್ದರು.

Post a Comment

Previous Post Next Post