ಶಿವಮೊಗ್ಗ: ಜಿಲ್ಲೆಯಲ್ಲೂ ರೂಪಾಂತರ ಕೊರೊನಾ ಭೀತಿ ಹೆಚ್ಚಾಗಿದೆ. ಬ್ರಿಟನ್ನಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ ಒಂದೇ ಕುಟುಂಬದ ನಾಲ್ವರಿಗೆ ಮ್ಯೂಟಂಟ್ ಕೊರೊನಾ ವೈರಸ್ ತಗುಲಿರುವುದು ದೃಢಪಟ್ಟಿದೆ.
ಡಿಸೆಂಬರ್ 21ರಂದು ನಾಲ್ವರು ಇಂಗ್ಲೆಂಡ್ನಿಂದ ಶಿವಮೊಗ್ಗಕ್ಕೆ ಆಗಮಿಸಿದ್ದರು. ಶಿವಮೊಗ್ಗ ಕೋವಿಡ್ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿದ ವೇಳೆ ಅವರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿತ್ತು. ಈ ಹಿನ್ನೆಲೆ ನಾಲ್ವರ ಮಾದರಿಗಳನ್ನು ಹೆಚ್ಚಿನ ಪರೀಕ್ಷೆಗಾಗಿ ಬೆಂಗಳೂರಿನ ಲ್ಯಾಬ್ಗೆ ಕಳುಹಿಸಿಕೊಡಲಾಗಿತ್ತು.
ಸೋಂಕಿತರಲ್ಲಿ ರೂಪಾಂತರ ಕೊರೊನಾ ವೈರಸ್ ಸೋಂಕು ಉಂಟಾಗಿದೆ ಎಂದು ಬೆಂಗಳೂರಿನ ಲ್ಯಾಬ್ನಲ್ಲಿ ನಡೆಸಿದ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಸದ್ಯ ಸೋಂಕಿತರನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಯ ಕೋವಿಡ್ ಕೇಂದ್ರಕ್ಕೆ ದಾಖಲಾಗಿದೆ.
Tags
ಶಿವಮೊಗ್ಗ