ಬೆಂಗಳೂರು : 2020ನೇ ಸಾಲಿಗೆ ರಾಜ್ಯದ 5762 ಗ್ರಾಮ ಪಂಚಾಯ್ತಿಗಳಿಗೆ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಿದೆ. ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಚುನಾವಣೆಯ ಪಾರದರ್ಶಕತೆಗಾಗಿ ಇದೀಗ ಚುನಾವಣಾ ಆಯೋಗವು ಜಿಲ್ಲಾವಾರು ವೀಕ್ಷಕರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಈ ಕುರಿತಂತೆ ಆದೇಶ ಹೊರಡಿಸಿರುವಂತ ರಾಜ್ಯ ಚುನಾವಣಾ ಆಯೋಗವು, ಕೋವಿಡ್ ಹಿನ್ನಲೆಯಲ್ಲಿ ಗ್ರಾಮ ಪಂಚಾಯ್ತಿಗಳ ಚುನಾವಣೆಯನ್ನು ಎರಡು ಹಂತದಲ್ಲಿ ನಡೆಸಲು ಆದೇಶಿಸಲಾಗಿದೆ. ಗ್ರಾಮ ಪಂಚಾಯ್ತಿ ಚುನಾವಣೆಯನ್ನು ಶಾಂತಿಯುತವಾಗಿ, ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಬೇಕಾಗಿರುವುದು ಆಯೋಗದ ಆದ್ಯ ಕರ್ತವ್ಯವಾಗಿರುತ್ತದೆ. ಈ ಹಿನ್ನಲೆಯಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆಯನ್ನು ಆಯೋಗದ ನಿರ್ದೇಶನ, ಮೇಲ್ವಿಚಾರಣೆ ಮತ್ತು ನಿಯಂತ್ರಣದಡಿಯಲ್ಲಿ ನಡೆಸಲು ಕೆಎಎಸ್(ಹಿರಿಯ ಶ್ರೇಣಿ) ವೃಂದದ ಅಧಿಕಾರಿಯನ್ನು ಚುನಾವಣಾ ವೀಕ್ಷಕರಾಗಿ ನೇಮಕ ಮಾಡಲಾಗಿದೆ.
Tags
ರಾಜ್ಯ