ವಿವಿಧ ಹುದ್ದೆಗಳ ನೇಮಕಾತಿಗೆ: ನೇರ ಸಂದರ್ಶನ

 ಹಾಸನ ಡಿ.30:-  ಹಾಸನದ ಹೆಸರಾಂತ ಕಂಪನಿಗಳು ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲು ಜ.1 ರಂದು ಮದ್ಯಾಹ್ನ 1 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ ಮೂಲಕ ಆಯ್ಕೆ ನಡೆಯಲಿದೆ.
       8ನೇ ತರಗತಿ ಎಸ್.ಎಸ್.ಎಲ್.ಸಿ/ ಪಿ.ಯು.ಸಿ/ ಐ.ಟಿ.ಐ/ ಡಿಪ್ಲೋಮೋ, ಯಾವುದೇ ಪದವಿ/ ನಲ್ಲಿ ತೇರ್ಗಡೆ ಹೊಂದಿದ 18 ರಿಂದ 30 ವರ್ಷ ಒಳಪಟ್ಟ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳ್ಳುತ್ತಿದ್ದು, ಆಸಕ್ತ ನಿರುದ್ಯೋಗಿ ಯುವಕ/ ಯುವತಿಯರು  ತಮ್ಮ ಸ್ವವಿವರಗಳು ಆಧಾರ್ ಕಾರ್ಡ್ ಮತ್ತು ಶೈಕ್ಷಣಿಕ ದಾಖಲಾತಿಗಳ ಜೆರಾಕ್ಸ್ ಪ್ರತಿಗಳೊಂದಿಗೆ ಕಛೇರಿಗೆ ಹಾಜರಾಗಿ ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.  
      
     ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಹಾಸನ ಇವರನ್ನು  ಇವರನ್ನು ಖುದ್ದಾಗಿ ಅಥವಾ ದೂ.ಸ : 08172-296374 ಅಥವಾ  8722606874 / 8660141863 ಅನ್ನು ಸಂಪರ್ಕಿಸಿ ಮಾಹಿತಿ ಪಡೆಯಲು ಕೋರಲಾಗಿದೆ.
ಕೋವಿಡ್ -19 ಇರುವ ಹಿನ್ನೆಲೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್  ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಎಲ್ಲಾ ರೀತಿಯ ಮುಂಜಾಗ್ರತಾ  ಕ್ರಮಗಳನ್ನ  ಪಾಲಿಸುವಂತೆ  ತಿಳಿಸಿದ್ದಾರೆ.

Post a Comment

Previous Post Next Post