ರಾಜ್ಯದ ವಿದ್ಯುತ್ ಗ್ರಾಹಕರಿಗೆ ಸರ್ಕಾರ ಶಾಕ್ ಮೇಲೆ ಶಾಕ್ ನೀಡುತ್ತಿದೆ. ವಿವಿಧ ಎಸ್ಕಾಂಗಳ ವಿದ್ಯುತ್ ಬಳಕೆದಾರರಿಗೆ 2020ರ ನವೆಂಬರ್ 1ರಿಂದ ಅನ್ವಯವಾಗುವಂತೆ ಪ್ರತಿ ಯೂನಿಟ್‌ಗೆ 40 ಪೈಸೆ ಹೆಚ್ಚಳ ಮಾಡಿದ್ದ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (ಕೆಇಆರ್‌ಸಿ) ಇದೀಗ ಮತ್ತೆ 5ರಿಂದ 8 ಪೈಸೆವರೆಗೆ ವಿದ್ಯುತ್ ದರ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಅಲ್ಲದೆ, ಮುಂದಿನ ಮೂರು ತಿಂಗಳಲ್ಲೇ (2021-22 ಆರ್ಥಿಕ ವರ್ಷ) ಮತ್ತೆ ವಿದ್ಯುತ್ ದರ ಹೆಚ್ಚಳಕ್ಕೆ ಸಿದ್ಧತೆ ನಡೆಸುತ್ತಿದ್ದು ಏಪ್ರಿಲ್ 1ರಿಂದ ಅನ್ವಯವಾಗುವಂತೆ ಎಷ್ಟುದರ ಹೆಚ್ಚಳ ಮಾಡಬೇಕು ಎಂಬ ಕುರಿತು ಪ್ರಸ್ತಾವನೆ ಸಲ್ಲಿಸಲು ವಿವಿಧ ಎಸ್ಕಾಂಗಳಿಗೆ ಸೂಚನೆ ನೀಡಿದೆ.
Tags
ರಾಜ್ಯ