ಮೈಸೂರು: ನೀರಿನ ಸಂಪಿಗೆ ಬಿದ್ದು ಪುಟ್ಟ ಕಂದಮ್ಮವೊಂದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಮೈಸೂರಿನಲ್ಲಿ ನಡೆದಿದೆ. ನಿರ್ಮಾಣ ಹಂತದಲ್ಲಿದ್ದ ಮನೆ ಮುಂದಿನ ಸಂಪಿಗೆ ಬಿದ್ದು ಒಂದೂವರೆ ವರ್ಷದ ಮಗು ಮೃತಪಟ್ಟಿದೆ.
ಹುಣಸೂರು ತಾಲ್ಲೂಕು ತೆಂಕಲಕೊಪ್ಪಲು ಗ್ರಾಮದ ನಿವಾಸಿ ನಟರಾಜ್ ಅವರ ಮಗು ದಯಾನಂದ ಮನೆ ಮುಂದೆ ಅಕ್ಕನೊಂದಿಗೆ ಆಟವಾಡುತ್ತಿದ್ದ. ಅಕ್ಕ ಮನೆ ಒಳಗೆ ಹೋಗಿ ಬರುವಷ್ಟರಲ್ಲಿ ಮಗು ನಾಪತ್ತೆಯಾಗಿತ್ತು. ಬಳಿಕ ಹುಡುಕಾಟ ನಡೆಸಿದಾಗ ಮಗುವಿನ ಮೃತದೇಹ ನೀರಿನ ಸಂಪಿನಲ್ಲಿ ಪತ್ತೆಯಾಗಿದೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Tags
ಕ್ರೈಂ