ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ರಾಜ್ಯ ಸರ್ಕಾರವು ಇತ್ತೀಚೆಗೆ ರದ್ದು ಮಾಡಿದ್ದ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ಮತ್ತೆ ಜಾರಿಗೊಳಿಸಲು ಸಮ್ಮತಿಸಿದೆ ಎಂದು ಸಚಿವಾಲಯದ ನೌಕರರ ಸಂಘದ ಅಧ್ಯಕ್ಷ ಪಿ. ಗುರುಸ್ವಾಮಿ ತಿಳಿಸಿದ್ದಾರೆ.


ಸಚಿವಾಲಯ ನೌಕರರ ಗಳಿಕೆ ರಜೆ ನಗದೀಕರಣ ತಡೆಹಿಡಿರುವುದನ್ನು ವಾಪಸ್ ಪಡೆಯುವುದಾಗಿ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಭರವಸೆ ನೀಡಿದ್ದಾರೆ.

ಸ್ಥಗಿತಗೊಂಡಿರುವ ತುಟ್ಟಿಭತ್ಯೆಯನ್ನು ಮತ್ತೆ ನೀಡಬೇಕು, ನಿವೃತ್ತಿ ಹೊಂದಿದ ಅಧಿಕಾರಿ ಹಾಗೂ ನೌಕರರ ನೇಮಕವನ್ನು ರದ್ದು ಮಾಡಬೇಕು. ಹೊರಗುತ್ತಿಗೆಯನ್ನು ನಿಲ್ಲಿಸಬೇಕು ಹಾಗೂ ನೌಕರ ವಿರೋಧಿ ನಿಯಮಾವಳಿಗಳನ್ನು ಕೂಡಲೇ ಹಿಂಪಡೆಯಬೇಕು ಎಂಬ ಬೇಡಿಕೆಗಳ ಬಗ್ಗೆ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುವುದಾಗಿ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಭರವಸೆ ನೀಡಿದ್ದಾರೆ.

Post a Comment

Previous Post Next Post