ಮುಂದಿನ ದಿನಗಳಲ್ಲಿ ಬಿಸಿಯೂಟವನ್ನು ಪಿಯುಸಿ ಕಾಲೇಜಿಗೂ ವಿಸ್ತರಿಸಬೇಕು :ವೈ.ಎ. ನಾರಾಯಣಸ್ವಾಮಿ

ರಾಜ್ಯ ಸರ್ಕಾರವು ಕಾಲೇಜು ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಲು ಮುಂದಾಗಿದ್ದು, ಮುಂದಿನ ದಿನಗಳಲ್ಲಿ ಬಿಸಿಯೂಟವನ್ನು ಪಿಯುಸಿ ಕಾಲೇಜಿಗೂ ವಿಸ್ತರಿಸಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ ಎಂದು ವಿಧಾನಸಭಾ ಸದಸ್ಯ ವೈ.ಎ. ನಾರಾಯಣಸ್ವಾಮಿ ಹೇಳಿದ್ದಾರೆ.  

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಯುಸಿ ಕಾಲೇಜ್ ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ. ಅದರ ಸಾಧಕ ಬಾಧಕಗಳ ಕುರಿತು ಚಿಂತನೆ ನಡೆದಿದೆ. ಇನ್ನೂ ಎರಡು, ಮೂರು ತಿಂಗಳಲ್ಲಿ ಖಾಸಗಿ ಶಿಕ್ಷಕರಿಗೆ ಒಂದು ಪ್ಯಾಕೇಜ್ ನೀಡುವ ಸಾಧ್ಯತೆ ಇದೆ ಎಂದರು.

ಇನ್ನು ಶಿಕ್ಷಕರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ. ಶಿಕ್ಷಕರಿಗೂ ಆಯುಷ್ಮಾನ್ ಭಾರತ್, ಆರೋಗ್ಯ ವಿಮೆ ಕೊಡಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

Post a Comment

Previous Post Next Post