ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪುಣ್ಯಸ್ಮರಣೆ
ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪುಣ್ಯಸ್ಮರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ರಾಜ್‌ಘಾಟ್‌ನಲ್ಲಿರುವ ಶಾಂತಿಧೂತನ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.
ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಹ ಸಹ ಗಾಂಧಿ ಸಮಾಧಿಗೆ ಗೌರವ ಸಲ್ಲಿಸಿದರು.
ಇದಕ್ಕೂ ಮುನ್ನ ಟೀಟ್ ಮಾಡಿರುವ ಪ್ರಧಾನಿ ಮೋದಿ, ಬಾಪು ಅವರ ಪುಣ್ಯ ತಿಥಿಯಂದು ನಮ್ಮ ಗೌರವ. ಅವರ ಆದರ್ಶಗಳು ನಿರಂತರವಾಗಿ ಜನರನ್ನು ಉತ್ತೇಜಿಸಲಿ ಎಂದಿದ್ದಾರೆ.
ಹುತಾತ್ಮರ ದಿನದಂದು ಭಾರತದ ಸ್ವಾತಂತ್ರ್ಯ ಮತ್ತು ಪ್ರತಿಯೊಬ್ಬ ಭಾರತೀಯರ ಯೋಗಕ್ಷೇಮಕ್ಕಾಗಿ ತಮ್ಮನ್ನು ತಾವು ಅರ್ಪಿಸಿಕೊಂಡ ಎಲ್ಲ ಏನ್ ಮಹಿಳೆಯರು ಮತ್ತು ಪುರುಷರ ವೀರರ ತ್ಯಾಗವನ್ನು ನಾವು ನೆನಪಿಸಿಕೊಳ್ಳುತ್ತೇವೆ ಎಂದು ಪ್ರಧಾನಿ ತಿಳಿಸಿದ್ದಾರೆ.
ಗಾಂಧಿ ಅವರನ್ನು 1948ರಂದು ನಾಥೋರಾಮ್ ಗೋಡ್ಲೆ ಗುಂಡಿಟ್ಟು ಹತ್ಯೆಗೈದರು. ಹೀಗಾಗಿ ಗಾಂಧಿ ಹತ್ಯೆ ದಿನವನ್ನು ಹುತಾತ್ಮರ ದಿನವೆಂದು ಆಚರಿಸಲಾಗುತ್ತದೆ.