ಕೊಣನೂರು : ಸಮಾಜದಲ್ಲಿ ಸ್ತ್ರೀಯರಿಗೆ ಸಿಗುತ್ತಿರುವ ಸ್ಥಾನಮಾನ. ಗೌರವಾದರಗಳು, ವಿವಿಧ ಉದ್ಯೋಗಗಳಲ್ಲಿನ ಅವಕಾಶಗಳು ಹೆಚ್ಚು ಲಭ್ಯವಾದರೆ ಮಹಿಳಾ ಸಬಲತೆಯು ಮತ್ತಷ್ಟು ಗಟ್ಟಿಗೊಳ್ಳುತ್ತದೆ ಎಂದು ಶ್ರೀವಿದ್ಯಾಶಂಕರ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಚಂದನ ಆರ್.ಪಿ. ಅಭಿಪ್ರಾಯಪಟ್ಟರು
ಪಂಚಾಯತ್‍ರಾಜ್ ಮತ್ತು ಗ್ರಾಮಾಭಿವೃದ್ಧಿ ಯೋಜನೆಯ ಅಡಿಯಲ್ಲಿ ರಾಮನಾಥಪುರ ಹೋಬಳಿಯ ರುದ್ರಪಟ್ಟಣ ಗ್ರಾ.ಪಂ ವತಿಯಿಂದ ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರವನ್ನು ಉಧ್ಘಾಟಿಸಿದ ಮಾತನಾಡಿದ ಅವರು ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ, ಶೋಷಣೆ, ದೌರ್ಜನ್ಯ, ದಬ್ಬಾಳಿಕೆಯಂತಹ ಅಸಾಂವಿಧಾನಿಕ ಕೃತ್ಯಗಳು ಘಟಿಸದಂತೆ ಮಹಿಳೆಯರು ಹೆಚ್ಚು ಜಾಗೃತರಾಗಬೇಕು ಎಂದು ತಿಳಿಸುತ್ತಾ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಡಿರುವ ಮಹಿಳಾ ಸಾಧಕಿಯರ ಹೆಸರುಗಳನ್ನು ಸ್ಮರಿಸಿದರು.
ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಅಂಗವಾಗಿ ಶಾಲಾ ಬಾಲಕಿಯರಿಗಾಗಿ ಹಮ್ಮಿಕೊಂಡಿದ್ದ ವಿವಿಧ ಕ್ರೀಡಾ ಮತ್ತು ಸಾಂಸ್ಕ್ರತಿಕ ಸ್ಫರ್ಧೆಗಳಲ್ಲಿ ವಿಜೇತರಾದವರಿಗೆ ಪದಕ ಮತ್ತು ಪ್ರಮಾಣ ಪತ್ರಗಳನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿನಿಯರು ಮಾರ್ಗದರ್ಶಿ ಶಿಕ್ಷಕ ಎ.ಬಿ.ಮೂರ್ತಿ ಯವರೊಂದಿಗೆ ಸುಗಮ ಸಂಗೀತ ಗೀತೆಗಳನ್ನು ಹಾಡಿದರು.
ಕಾರ್ಯಕ್ರಮಕ್ಕೆ ಸ್ವಾಗತವನ್ನು ವಿದ್ಯಾರ್ಥಿನಿ ಚೈತ್ರ, ನಿರೂಪಣೆಯನ್ನು ಚಿತ್ರ, ಸಿಡಿಪಿಓ ಹರಿಪ್ರÀಸಾದ್, ವಿದ್ಯಾಶಂಕರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೊಡ್ಡೇಗೌಡ, ವಿದ್ಯಾಶಂಕರ ಪ್ರೌಢಶಾಲೆಯ ಮುಖ್ಯಶಿಕ್ಷಕ ಜಿ.ಬಿ.ರಾಥೋಡ್, ಸಹಿಪ್ರಾ ಶಾಲೆಯ ಮುಖ್ಯ ಶಿಕ್ಷಕ ನಾಗರಾಜ ಶೆಟ್ಟಿ, ಇಸಿಓ ಪೊನ್ನಪ್ಪ, ರುದ್ರಪಟ್ಟಣ, ಮತ್ತಿಗೋಡು, ವಡ್ಡರಹಳ್ಳಿ, ಆನಂದೂರು, ಕಂಠಾಪುರ ಶಾಲೆಗಳ ಮುಖ್ಯ ಶಿಕ್ಷಕರು, ಸಹಶಿಕ್ಷಕರು ಮತ್ತು ವಿದ್ಯಾರ್ಥಿನಿಯರು ಗ್ರಾಮದ ಮಹಿಳೆಯರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.
ಫೋಟೋ 1 : ರಾಮನಾಥಪುರ ಹೋಬಳಿಯ ಸಂಗೀತ ಗ್ರಾಮ ರುದ್ರಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಕ್ಕಳು.
ಫೋಟೋ 2 : ರಾಮನಾಥಪುರ ಹೋಬಳಿಯ ಸಂಗೀತ ಗ್ರಾಮ ರುದ್ರಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಶ್ರೀ ವಿದ್ಯಾಶಂಕರ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಆರ್.ಪಿ. ಚಂದನ ಮಾತನಾಡಿದರು.
ಫೋಟೋ 3 : ರಾಮನಾಥಪುರ ಹೋಬಳಿಯ ಸಂಗೀತ ಗ್ರಾಮ ರುದ್ರಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು ಮಾರ್ಗದರ್ಶಿ ಶಿಕ್ಷಕ ಎ.ಬಿ.ಮೂರ್ತಿ ಯವರೊಂದಿಗೆ ಸುಗಮ ಸಂಗೀತ ಹಾಡಿದರು.