ಹಾಸನ : ಈಗಾಗಲೇ ಶಾಲಾ- ಕಾಲೇಜುಗಳು ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗದಂತೆ ಕೂಡಲೇ ಸರಕಾರ ಗಮನ ನೀಡಿ ಕೂಡಲೇ ಉಪನ್ಯಾಸಕರನ್ನು ನೇಮಕ ಮಾಡಿಕೊಂಡು ತರಗತಿ ನಡೆಸುವಂತೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಜಿಲ್ಲೆಯ ಕೆಲವು ಸರಕಾರಿ ಕಾಲೇಜುಗಳಲ್ಲಿ ಖಾಯಂ ಉಪನ್ಯಾಸಕರಿಲ್ಲದೆ ತರಗತಿಗಳು ನಡೆಯುತ್ತಿಲ್ಲ. ತಕ್ಷಣ ತರಗತಿಗಳು ನಡೆಯಲು ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಡಿಸೆಂಬರ್ 17 ರಿಂದಲೇ ತರಗತಿಗಳು ಪ್ರಾರಂಭವಾಗಿದ್ದು, ಆದರೆ ಅನೇಕ ಪದವಿ ಕಾಲೇಜುಗಳ ಕೆಲವು ವಿಭಾಗಗಳಲ್ಲಿ ಖಾಯಂ ಉಪನ್ಯಾಸಕರಿಲ್ಲದೆ ತರಗತಿಗಳು ನಡೆಯುತ್ತಿಲ್ಲ. ಇನ್ನು ಸರ್ಕಾರ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಂಡಿರುವುದಿಲ್ಲ. ಹಾಸನ ನಗರದ ಗೃಹ ವಿಜ್ಞಾನ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಒಬ್ಬರು ಸಹ ಖಾಯಂ ಉಪನ್ಯಾಸಕರಿಲ್ಲ. ನಗರದ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಬಿ.ಸಿ.ಎ. ವಿಭಾಗದಲ್ಲಿ ಖಾಯಂ ಉಪನ್ಯಾಸಕರಿಲ್ಲ ಸ್ಭೆರಿದಂತೆ ಹಾಸನ ಜಿಲ್ಲೆಯ ಅನೇಕ ಸರ್ಕಾರಿ ಪದವಿ ಕಾಲೇಜುಗಳ ಪರಿಸ್ಥಿತಿ ಇದೆಯಾಗಿದೆ ಎಂದು ದೂರಿದರು. ಈ ಪರಿಸ್ಥಿತಿಯನ್ನು ಸರಿಪಡಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗದಂತೆ ಅತಿಥಿ ಉಪನ್ಯಾಸಕರನ್ನು ನೇಮಿಸಿ ತರಗತಿಗಳು ನಡೆಯುವ ಹಾಗೆ ತಕ್ಷಣ ಕ್ರಮ ಕೈಗೊಳ್ಳಬೇಕು. ಸರ್ಕಾರ ಆದಷ್ಟು ಬೇಗ ಖಾಯಂ ಉಪನ್ಯಾಸಕರನ್ನು ನೇಮಿಸಬೇಕು. ಸರಕಾರವು ನಮ್ಮ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುವುದಾಗಿ ಮನವಿ ಮಾಡಿದ ಅವರು, ಏನಾದರೂ ಕ್ರಮ ಕೈಗೊಳ್ಳದೇ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದರೆ ಮುಂದಿನ ದಿನಗಳಲ್ಲಿ ಎಬಿವಿಪಿಯಿಚಿದ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.
ಇದೆ ವೇಳೆ ಎಬಿವಿಪಿಯ ಬೊಮ್ಮಣ್ಣ, ಅರುಣ್, ಕಿರಣ್, ಚೇತನ್, ಭರತ್, ಮಂಜು, ಪೂಜಾ ಇತರರು ಪಾಲ್ಗೊಂಡಿದ್ದರು.
Tags
ಹಾಸನ