ಎಫ್ ಡಿ ಎ ಪರೀಕ್ಷೆ ಅನಿವಾರ್ಯ ಕಾರಣಗಳಿಂದ ಮುಂದೂಡಿಕೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಧಿಸೂಚನೆ ಅನ್ವಯ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಾಳೆ ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಕೆಲವೊಂದು ದುಷ್ಕರ್ಮಿಗಳ ಕೈ ಸೇರಿರುವುದು ತಿಳಿದು ಬಂದಿರುವ ಹಿನ್ನೆಲೆಯಲ್ಲಿ ಜನವರಿ 24 ರಂದು ನಡೆಯಬೇಕಿದ್ದ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ. ದಿನಾಂಕವನ್ನು ಮರು ನಿಗದಿಪಡಿಸಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ತಿಳಿಸಿದ್ದಾರೆ.

Post a Comment

Previous Post Next Post