ಡ್ರಗ್ಸ್ ಮಾರಾಟ ಜಾಲ ದಂಧೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಜಾಮೀನು ಸಿಕ್ಕಿದೆ.
ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಗುರುವಾರ ರಾಗಿಣಿ ದ್ವಿವೇದಿಗೆ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಸೆಷನ್ಸ್ ಮತ್ತು ಹೈಕೋರ್ಟ್ ಜಾಮೀನು ನಿರಾಕರಿಸಿದ್ದರಿಂದ ರಾಗಿಣಿ ಪರ ವಕೀಲರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ಇಂದಿಗೆ ಮುಂದೂಡಲಾಗಿತ್ತು.
ಅನೇಕ ಸೆಲೆಬ್ರಿಟಿಗಳಿಗೆ ಮತ್ತು ಪ್ರಮುಖ
ಡ್ರಗ್ಸ್ ಪೂರೈಸುತ್ತಿದ್ದವರೊಂದಿಗೆ ನಂಟು ಹೊಂದಿದ್ದ ಆರೋಪದ ಮೇಲೆ ಆರೋಪಿ, ರಾಗಿಣಿಯ ಗೆಳೆಯ ಎಂದು ಹೇಳಲಾಗುತ್ತಿರುವ ರವಿಶಂಕರ್ ನೀಡಿದ್ದ ಹೇಳಿಕೆ ಮೇಲೆ ಕಳೆದ ಸೆಪ್ಟೆಂಬರ್ 4ರಂದು ರಾಗಿಣಿಯನ್ನು ಸಿಸಿಬಿ ಪೊಲೀಸರು ಬೆಂಗಳೂರಿನ ಯಲಹಂಕದಲ್ಲಿರುವ ಅವರ ಅಪಾರ್ಟ್ ಮೆಂಟ್ ನಲ್ಲಿ ಬಂಧಿಸಿದ್ದರು.ಇದೇ ಪ್ರಕರಣದಲ್ಲಿ ಬಂಧಿಯಾಗಿದ್ದ ಮತ್ತೊಬ್ಬ ನಟಿ ಸಂಜನಾ ಗಲ್ರಾಣಿಗೆ ಕಳೆದ ಡಿಸೆಂಬರ್ 11ರಂದು ಅನಾರೋಗ್ಯ ನೆಪದಲ್ಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.