ಖಾತೆ ಹಂಚಿಕೆ ಬಗ್ಗೆ ದೊಡ್ಡ ಮಟ್ಟದ ಅಸಮಾಧಾನ ಯಾವುದೂ ಇಲ್ಲ : ಉಮೇಶ್ ಕತ್ತಿ

ಬೆಂಗಳೂರು,ಜ.21- ಖಾತೆ ಹಂಚಿಕೆ ಬಗ್ಗೆ ದೊಡ್ಡ ಮಟ್ಟದ ಅಸಮಾಧಾನ ಯಾವುದೂ ಇಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾತೆ ಮರು ಹಂಚಿಕೆ ಬಗ್ಗೆ ಕೆಲವರಲ್ಲಿ ಅಸಮಾಧಾನವಿದೆ ಎಂಬ ಪ್ರಶ್ನೆಗೆ ಅವರನ್ನೇ ಕೇಳಿ ಎಂದು ಪ್ರತಿಕ್ರಿಯಿಸಿದರು.


ರಾಜ್ಯದ ಮಂತ್ರಿಯಾಗಿ ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡುತ್ತೇನೆ. ಬಿಪಿಎಲ್ ಪಡಿತರದಾರರಿಗೆ ಅನುಕೂಲವಾಗುವಂತೆ ಕೆಲಸ ಮಾಡುತ್ತೇನೆ. ಅವರಿಗೆ ಜೋಳ, ರಾಗಿ ದೊರೆಯುವಂತೆಯೂ ಮಾಡುತ್ತೇನೆ. ಖಾತೆ ಹಂಚಿಕೆ ವಿಚಾರದಲ್ಲಿ ಯಾವುದೇ ಅಸಮಾಧಾನ ನನಗಿಲ್ಲ. ಈ ಹಿದೆಯೂ 13 ವರ್ಷ ಮಂತ್ರಿಯಾಗಿ ಕೆಲಸ ಮಾಡಿದ ಅನುಭವವಿದೆ. ನನಗೆ ಮಂತ್ರಿ ಸ್ಥಾನ ಹೊಸದೇನು ಅಲ್ಲ ಎಂದು ತಿಳಿಸಿದರು.

Post a Comment

Previous Post Next Post