ಹಾಸನ: ಹಾಸನದ ಹೊರವಲಯದ ವರ್ತುಲ ರಸ್ತೆಯಲ್ಲಿ ರುವ ಬೂವನಹಳ್ಳಿ ಕ್ರಾಸ್ ಬಳಿ ಆಕ್ಟೀವ್ ಹೋಂಡಾ ಮತ್ತು ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಅಪಘಾತ ಸಂಭವಿಸಿ ವ್ಯಕ್ತಿಯೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ .ಇದೇ ವೇಳೆಗೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಬೆಂಗಳೂರಿನಿಂದ ಹಾಸನಕ್ಕೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ದೃಶ್ಯ ಕಂಡ ತಕ್ಷಣವೇ ತಮ್ಮ ಕಾರು ನಿಲ್ಲಿಸಿ ನೋವಿಗೆ ಸ್ಪಂದಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಗಾಯಾಳು ವ್ಯಕ್ತಿಯನ್ನು ತಮ್ಮ ಬೆಂಗಾವಲು ವಾಹನದಲ್ಲಿ ಚಿಕಿತ್ಸೆ ಗಾಗಿ ಆಸ್ಪತ್ರೆಗೆ ದಾಖಲಿಸಿ ಕಷ್ಟಕ್ಕೆ ಸ್ಪಂದಿಸಿದ್ದಾರೆ.
ಗಾಯಾಳು ವ್ಯಕ್ತಿಯನ್ನು ತಮ್ಮ ಬೆಂಗಾವಲು ವಾಹನದಲ್ಲಿ ಚಿಕಿತ್ಸೆ ಗಾಗಿ ಆಸ್ಪತ್ರೆಗೆ ದಾಖಲಿಸಿ ಕಷ್ಟಕ್ಕೆ ಸ್ಪಂದಿಸಿದ್ದಾರೆ.
Tags
ಹಾಸನ