ಕೆ.ಪಿ.ಸಿ.ಸಿ ಕಾರ್ಮಿಕ ವಿಭಾಗದ ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ಎಸ್ ಹರೀಶ್

ಅರಸೀಕೆರೆ:- ಕೆ.ಪಿ.ಸಿ.ಸಿ ಕಾರ್ಮಿಕ ವಿಭಾಗದ ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ಎಸ್ ಹರೀಶ್ ಅವರನ್ನು ಕಾಂಗ್ರೇಸ್ ಪಕ್ಷದ ನಾಯಕ ದೇವೇಂದ್ರಪ್ಪ ಅವರ ಶೀಫಾರಸ್ಸಿನ ಮೇರೆಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದು ಕಾಂಗ್ರೇಸ್ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಕೆ.ಪುಟ್ಟಸ್ವಾಮಿ ಗೌಡ ತಿಳಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಅ„ಕಾರದ ಪತ್ರವನ್ನು ನೀಡಿದ ಅವರು ಈ ಹೊಣೆಗಾರಿಕೆಯನ್ನು ನಿಷ್ಠೆಯಿಂದ ನಿರ್ವಹಿಸಿ ರಾಜ್ಯ ಮತ್ತು ಜಿಲ್ಲಾ ಕಾಂಗ್ರೇಸ್ ಸಮಿತಿಯ ಮಾರ್ಗದರ್ಶನದಲ್ಲಿ ಹಾಗೂ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸ್ಥಳೀಯ ನಾಯಕರುಗಳ ಸಹಕಾರದೊಂದಿಗೆ ತಮಗೆ ನೀಡಲಾಗಿರುವ ಜವಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ ಪಕ್ಷ ಸಂಘಟನೆಗೆ ಹಾಗೂ ಕಾರ್ಮಿಕರ ಏಳಿಗೆಗಾಗಿ ಶ್ರಮಿಸುವಂತೆ ಪತ್ರದಲ್ಲಿ ಸೂಚಿಸಿದ್ದಾರೆ.

Post a Comment

Previous Post Next Post