ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ರಾಜಭವನಕ್ಕೆ ಮುತ್ತಿಗೆ ಹಾಕಲು ಹೊರಟಿದ್ದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನು ಮಾರ್ಗ ಮಧ್ಯದಲ್ಲಿಯೇ ಪೊಲೀಸರು ತಡೆದು ವಶಕ್ಕೆ ಪಡೆದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಶಾಸಕಾಂಕಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಹಲವು ಪ್ರತಿಭನಾನಿರತರನ್ನು ಮಹಾರಾಣಿ ಕಾಲೇಜು ಬಳಿ ಪೊಲೀಸರು ವಶಕ್ಕೆ ಪಡೆದು, ಬಿಎಂಟಿಸಿ ಬಸ್ನಲ್ಲಿ ಕರೆದೊಯ್ದರು.
ಜೈಲಿಗೆ ಹೋಗಲು ತಯಾರು: ಫ್ರೀಡಂ ಪಾರ್ಕ್ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿ ಡಿ.ಕೆ. ಶಿವಕುಮಾರ್, 'ಮೂರು ಮರಣಶಾಸನಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಪ್ರತಿಭಟನೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದೀರಿ. ಪ್ರಧಾನಮಂತ್ರಿ ಗಮನ ಸೆಳೆಯಲು ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ರೈತರಿಗೆ ಬೆಂಭಲು ವ್ಯಕ್ತಪಡಿಸಿ ಈ ಹೋರಾಟ ನಡೆಯುತ್ತಿದೆ. ಇದೊಂದು ಐತಿಹಾಸಿಕ ಹೋರಾಟ, ಇತಿಹಾಸ ಪುಟದಲ್ಲಿ ಇಲ್ಲಿರುವವರು ಸೇರುತ್ತಿದ್ದೀರಿ' ಎಂದರು.
ಕುಸಿದು ಬಿದ್ದ ಶಾಸಕಿ ಅಂಜಲಿ ನಿಂಬಾಳ್ಕರ್
ರಾಜಭವನ ಮುತ್ತಿಗೆಗೆ ಹಾಕಲು ಹೊರಟ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರನ್ನು ಮಹಾರಾಣಿ ಕಾಲೇಜು ಮುಂಭಾಗದಲ್ಲಿ ಬ್ಯಾರಿಕೇಡ್ ಹಾಕಿ ತಡೆದ ಪೋಲಿಸರು ತಡೆದರು. ಈ ವೇಳೆ, ಪೊಲೀಸರು ಮತ್ತು ಶಾಸಕಿಯರಾದ ಸೌಮ್ಯಾ ರೆಡ್ಡಿ, ಅಂಜಲಿ ನಿಂಬಾಳ್ಕರ್ ಹಾಗೂ ಪೋಲಿಸರ ನಡುವೆ ಮಾತಿನ ಚಕಮಕಿ ನಡೆಯಿತು. ಪೊಲೀಸರು ವಶಕ್ಕೆ ಪಡೆಯಲು ಮುಂದಾದ ವೇಳೆ ಅಂಜಲಿ ನಿಂಬಾಳ್ಕರ್ ಕುಸಿದು ಬಿದ್ದರು. ಈ ವೇಳೆ, ಪೊಲೀಸರು ಕುಡಿಯಲು ನೀರಿ ಕೊಟ್ಟು ಉಪಚರಿಸಿದರು.