ಕೋವಿಡ್ ವಿರುದ್ಧ ನಿರ್ಣಾಯಕ ಹೋರಾಟ; ಮೊದಲ ಹಂತದಲ್ಲಿ ಲಸಿಕೆ ಉಚಿತ: ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರ ವಿಡಿಯೋ ಕಾನ್ಫರೆನ್ಸ್ ನಲ್ಲಿ ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಆರೋಗ್ಯ ಸಚಿವ ಡಾ.ಸುಧಾಕರ್ ಭಾಗಿಯಾಗಿದ್ದಾರೆ.

ಜನವರಿ 16ರಿಂದ ದೇಶಾದ್ಯಂತ ಕೋವಿಡ್ ಲಸಿಕೆ ವಿತರಣೆ ಆರಂಭವಾಗಲಿದೆ ಎಂದು ಶನಿವಾರ ಕೇಂದ್ರ ಸರ್ಕಾರ ಘೋಷಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ದೇಶೀಯವಾಗಿ ಅಭಿವೃದ್ದಿಪಡಿಸಿದ ಲಸಿಕೆ ಹಾಗೂ ಅದರ ಹಂಚಿಕೆ ಕುರಿತು ಮಾಹಿತಿ ನೀಡಿದರು.
ದೇಶೀಯವಾಗಿ ಉತ್ಪಾದಿಸಲಾದ ಕೊವಿಶೀಲ್ಡ್ ಹಾಗೂ ಕೊವ್ಯಾಕ್ಸಿನ್ ಬಳಕೆಗೆ ಅನುಮತಿ ದೊರಕಿದೆ. ಮೂರು ಕೋಟಿ ಜನರಿಗೆ ಲಸಿಕೆ ನೀಡಿದ ನಂತರ ನಾವು ಮತ್ತೊಮ್ಮೆ ಮಾತುಕತೆಗೆ ಕುಳಿತುಕೊಳ್ಳೋಣ ಎಂದು ಪ್ರಧಾನಿ ಈ ಸಂದರ್ಭದಲ್ಲಿ ಹೇಳಿದರು.

ಕೊವಿಶೀಲ್ಡ್ ಪ್ರತಿ ಡೋಸ್ ನ ಬೆಲೆ 220 ರೂಪಾಯಿ. ರಿಯಲ್ ಟೈಮ್ ಲಸಿಕೆ ಅಂಕಿಅಂಶದ ಬಗ್ಗೆ ಕೋವಿನ್ ಆ್ಯಪ್ ನಲ್ಲಿ ಮಾಹಿತಿ ಅಪ್ ಡೇಟ್ ಮಾಡಲಾಗುವುದು. ಫ್ರಂಟ್ ಲೈನ್ ವಾರಿಯರ್ಸ್ ಗೆ ಮೊದಲ ಹಂತದಲ್ಲಿ ಉಚಿತವಾಗಿ ಲಸಿಕೆ ನೀಡಲಾಗುವುದು, ಇದರಲ್ಲಿ ಸಫಾಯಿ ಕರ್ಮಚಾರಿಗಳು, ಆರೋಗ್ಯ ಸಿಬ್ಬಂದಿಗಳು ಸೇರಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ವದಂತಿ ಮತ್ತು ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ಈ ವೇಳೆ ಪ್ರಧಾನಿ ಮೋದಿ ಮನವಿ ಮಾಡಿಕೊಂಡರು.

Post a Comment

Previous Post Next Post