ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಸಂಪುಟ ಸೇರಲಿರುವವರ ಪಟ್ಟಿ ಸಿದ್ದವಾಗಿದೆ. ಇಂದು ಸಂಜೆ ನೂತನ ಸಚಿವರ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು, 7 ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಸಿಎಂ ಬಿ ಎಸ್ ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡಿದರು. ರಾಜಭವನಕ್ಕೆ ಪಟ್ಟಿ ಕಳುಹಿಸಲಾಗಿದ್ದು, ಏಳು ಜನರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದರು.
ಬಿಜೆಪಿ ಸರ್ಕಾರ ರಚನೆಗೆ ಸಹಾಯವಾಗಿದ್ದ ವಿಧಾನ ಪರಿಷತ್ ಸದಸ್ಯರಾದ ಎಂ.ಟಿ.ಬಿ.ನಾಗರಾಜ್, ಆರ್.ಶಂಕರ್, ಸಿ.ಪಿ.ಯೋಗೇಶ್ವರ್, ಜೊತೆಗೆ ಶಾಸಕರಾದ ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ, ಹುಕ್ಕೇರಿ ಶಾಸಕ ಉಮೇಶ್ ಕತ್ತಿ, ಬಿಳಗಿ ಶಾಸಕ ಮುರುಗೇಶ್ ನಿರಾಣಿ, ಸುಳ್ಯ ಶಾಸಕ ಎಸ್.ಅಂಗಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನಗೆ ಈ ಬಾರಿ ಅವಕಾಶ ಸಿಕ್ಕಿಲ್ಲ. ವರಿಷ್ಠರ ಸೂಚನೆ ಮೇರೆಗೆ ಮುನಿರತ್ನ ಅವರಿಗೆ ಈ ಬಾರಿ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿಲ್ಲ ಎನ್ನಲಾಗಿದೆ.
Tags
ರಾಜ್ಯ