ಅಪಘಾತದಲ್ಲಿ RSS ಮುಖಂಡ ದೇಶಪಾಂಡೆ ವಿಧಿವಶ

ಬೀದರ್: ಬೈಕ್ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿ ಪರಿಣಾಮ ಆರ್‍ಎಸ್‍ಎಸ್‍ನ ವಿಭಾಗೀಯ ಪ್ರಮುಖ ಸುಧಾಕರ್ ದೇಶಪಾಂಡೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನಲ್ಲಿ ನಡೆದಿದೆ..


ಭಾಲ್ಕಿ ತಾಲೂಕಿನ ಭಾತಂಬ್ರಾ ರಸ್ತೆಯಲ್ಲಿ ಮಹಾರಾಷ್ಟ್ರ ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ 65 ವರ್ಷದ ಸುಧಾಕರ್ ದೇಶಪಾಂಡೆ ಸಾವನ್ನಪ್ಪಿದ್ದಾರೆ. ಇವರ ಜೊತೆ ಬೈಕ್ ನಲ್ಲಿದ್ದ ಮತ್ತೋರ್ವ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದಶಕಗಳ ಕಾಲ ಹಿಂದೂ ಜಾಗರಣ ವೇದಿಕೆ, ವಿಶ್ವ ಹಿಂದು ಪರಿಷತ್ ಹಾಗೂ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಹಲವು ಕಾರ್ಯಗಳಲ್ಲಿ ಸುಧಾಕರ ದೇಶಪಾಂಡೆ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಇಂದು ಆರ್.ಎಸ್.ಎಸ್ ಮುಖಂಡರ ದೇಶಪಾಂಡೆ ಸಾವಿಗೆ ಹಿಂದೂ ಪರ ಸಂಘಟನೆಗಳು ಹಾಗೂ ಬಿಜೆಪಿ ಮುಖಂಡರು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಭಾಲ್ಕಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Post a Comment

Previous Post Next Post